ಖೈದಿಗಳಿಗೆ ಖುಷಿ: ರಾಜ್ಯಾದ್ಯಂತ 375 ಮಂದಿ ಬಿಡುಗಡೆ
ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 375 ಮಂದಿ ಕೈದಿಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಭಾಗ್ಯ ನೀಡಿದೆ...

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 375 ಮಂದಿ ಕೈದಿಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಭಾಗ್ಯ ನೀಡಿದೆ.
ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 375 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈಗಾಗಲೇ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಈ ಕುರಿತ ಶಿಫಾರಸು ಕಡತ ರವಾನೆಯಾಗಿದ್ದು, 14 ವರ್ಷಕ್ಕೂ ಮೇಲ್ಪಟ್ಟು ಶಿಕ್ಷೆ ಅನುಭವಿಸಿದ ಮಾಫಿ ರಹಿತ 120 ಕೈದಿಗಳು ಹಾಗೂ ಮಾಫಿ ಸಹಿತ 14 ವರ್ಷ ಶಿಕ್ಷೆಗೊಳಗಾಗಿರುವ ಕೈದಿಗಳು ಸೇರಿ ಒಟ್ಟು 375 ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ಇದರಲ್ಲಿ 13 ಮಹಿಳಾ ಕೈದಿಗಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಕೈದಿಗಳ ಬಿಡುಗಡೆ ಕುರಿತು ಸಚಿವ ಸಂಪುಟ ಸಮಿತಿಯನ್ನು ರಚಿಸಿ ಅದರ ಅಭಿಪ್ರಾಯಪಡೆಯಲಾಗಿತ್ತು. ಇದಕ್ಕೆ ಆಕ್ಷೇಪಗಳು ಬಂದ ಹಿನ್ನಲೆಯಲ್ಲಿ ವಿಚಾರ ಸುಪ್ರೀಂಕೋರ್ಟ್ ವರೆಗೂ ಹೋಗಿತ್ತು. ಅಂತಿಮವಾಗಿ ಸುಪ್ರೀಂ ನೀಡಿರುವ ಆದೇಶದಂತೆ ನಿಯಮಗಳನ್ನು ಪಾಲಿಸಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೈದಿಗಳ ಬಿಡುಗಡೆಗೆ ರಾಜ್ಯಪಾಲ ವಿ.ಆರ್.ವಾಲಾ ಅವರೂ ಮುಕ್ತ ಮನಸ್ಸು ಹೊಂದಿರುವುದರಿಂದ ಸಂಪುಟ ನಿರ್ಣಯಕ್ಕೆ ಅಂಕಿತ ಹಾಕುವ ಸಾಧ್ಯತೆ ಇದ್ದು, ಮಂಗಳವಾರ ಸಂಜೆ ಅಥವಾ ಬುಧವಾರ ಕೈದಿಗಳು ಬಿಡುಗಡೆಯಾಗಲಿದ್ದಾರೆ.
ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಎಲ್ಲ ಅಡ್ಡಿಗಳು ನಿವಾರಣೆ ಆಗಿರುವುದರಿಂದ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ 90, ವಿಜಯಪುರದಲ್ಲಿ 38, ಬೆಳಗಾವಿಯಲ್ಲಿ 114, ಧಾರವಾಡ 10, ಮೈಸೂರು 42, ಕಲಬುರಗಿ 50 ಹಾಗೂ ಬಳ್ಳಾರಿ ಕಾರಾಗೃಹದಲ್ಲಿರುವ 23 ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


