ಕೇರಳ ಸಿಎಂ ಚಾಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧದ ಎಫ್‌ಐಆರ್‌ಗೆ ಕೇರಳ...

Published On :
ಕೊಚ್ಚಿ: ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧದ ಎಫ್‌ಐಆರ್‌ಗೆ ಕೇರಳ ಹೈಕೋರ್ಟ್ ಶುಕ್ರವಾರ ತಡೆ ನೀಡಿದ್ದು, ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತ್ರಿಶೂರಿನ ವಿಚಕ್ಷಣ ನ್ಯಾಯಾಲಯ ನಿನ್ನೆ ಉಮನ್ ಚಾಂಡಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದ ನಂತರ ಪ್ರತಿಪಕ್ಷಗಳು ಸಿಎಂ ರಾಜಿನಾಮೆಗೆ ಒತ್ತಾಯಿಸಿದ್ದವು.
ಆದರೆ ವಿಚಕ್ಷಣ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಾಂಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಹಾಗೂ ಅವರ ಸಂಪುಟದ ಸಹೋದ್ಯೋಗಿ ವಿದ್ಯುತ್ ಸಚಿವ ಆರ್ಯಾಡನ್ ಮೊಹಮ್ಮದ್ ವಿರುದ್ಧ ಎರಡು ತಿಂಗಳವರೆಗೆ ಎಫ್‌ಐಆರ್ ದಾಖಲಿಸದಂತೆ ತಡೆಯಾಜ್ಞೆ ವಿಧಿಸಿದೆ.
ಮಾಧ್ಯಮಗಳ ವರದಿಯ ಪ್ರಕಾರ, ಹೈಕೋರ್ಟ್ ನ್ಯಾಯಮೂರ್ತಿ ಪಿ.ಉಬೈದ್ ಅವರು ಈ ಸಂಬಂಧ ವಿಚಕ್ಷಣ ಕೋರ್ಟ್‌ನ್ನು ತರಾಟೆಗೆ ತೆಗೆದುಕೊಂಡಿದ್ದು, ವಿಚಕ್ಷಣ ಕೋರ್ಟ್ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


