ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್ ವಿಧಿವಶ
1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.

ನವದೆಹಲಿ: 1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾಗಿದ್ದ ಸಂದರ್ಭದಲ್ಲಿ ಕೃಷ್ಣರಾವ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸಹ ಕಾರ್ಯನಿರ್ವಹಿಸಿದ್ದರು. 1942 ರಲ್ಲಿ ಸೇನೆಗೆ ಸೇರಿದ್ದ ಕೃಷ್ಣ ರಾವ್ 4 ದಶಕಗಳ ಕಾಲ ಸೇನೆಯಲ್ಲಿದ್ದು ಭಾರತೀಯ ಸೇನೆಯ 14 ನೇ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಎರಡನೇ ಮಹಾಯುದ್ಧದ ವೇಳೆ ಬರ್ಮಾ, ನಾರ್ತ್ ವೆಸ್ಟ್ ಫ್ರಾಂಟಿಯರ್, ಬಲೂಚಿಸ್ತಾನದಲ್ಲೂ ಕೃಷ್ಣಾ ರಾವ್ ಸೇವೆ ಸಲ್ಲಿಸಿದ್ದರು. ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಕೃಷ್ಣ ರಾವ್ 1949 -51 ರಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡಮಿಯನ್ನು ಸ್ಥಾಪಿಸಿ ಮಾರ್ಗದರ್ಶಕರಾಗಿದ್ದರು. ಕೃಷ್ಣರಾವ್ ಅವರ ನಿಧನಕ್ಕೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


