ಮೋದಿ ವಿದ್ಯಾರ್ಥಿಗಳ ಉತ್ಸಾಹ ಕುಗ್ಗಿಸುತ್ತಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭಾರತದ ಯುವಕರ ಉತ್ಸಾಹವನ್ನು ಕುಗ್ಗಿಸುತ್ತಿದ್ದಾರೆ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭಾರತದ ಯುವಕರ ಉತ್ಸಾಹವನ್ನು ಕುಗ್ಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರೋಹಿತ್ ವೇಮುಲಾ ಆತ್ಮಹತ್ಯೆ ಖಂಡಿಸಿ ಹೈದರಾಬಾದ್ ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂದೇ ರೀತಿಯ ಆಲೋಚನೆಗಳನ್ನು ಹೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಯುವ ವಿದ್ಯಾರ್ಥಿಗಳಲ್ಲಿರುವ ಉತ್ಸಾಹವನ್ನು ಕುಗ್ಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಹಾಗೂ ಆರ್.ಎಸ್ ಎಸ್ ವಿದ್ಯಾರ್ಥಿಗಳ ಮೇಲೆ ಒಂದೇ ರೀತಿಯ ವಿಚಾರಧಾರೆಗಳನ್ನು ಹೇರಲು ಹೊರಟಿರುವುದಕ್ಕೆ ತಮ್ಮ ವಿರೋಧವಿದೆ. ಪ್ರಧಾನಿ ಮೋದಿ, ಆರ್ ಎಸ್ಎಸ್ ತಮ್ಮ ವಿಚಾರಧಾರೆಗಳನ್ನು ಹೇಳಲಿ, ಅದನ್ನು ವಿದ್ಯಾರ್ಥಿಗಳು ಒಪ್ಪಿದರೆ ತಮ್ಮ ವಿರೋಧ ಇಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ನಿಮ್ಮ ವಿಚಾರಧಾರೆಗಳನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳನ್ನು ಒತ್ತಾಯಿಸಬೇಡಿ, ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ದಡ್ಡರಲ್ಲ, ಇಲ್ಲಿರುವವರಿಗೆ ಪ್ರಾಪಂಚಿಕ ಜ್ಞಾನದ ಅರಿವಿದೆ, ವಿಚಾರಧಾರೆಗಳನ್ನು ಹೇರುವ ಬದಲು ವಿದ್ಯಾರ್ಥಿಗಳ ಬುದ್ಧಿಮತ್ತೆಯನ್ನು ಗೌರವಿಸಿ ಎಂದು ರಾಹುಲ್ ಗಾಂಧಿ ಮೋದಿಗೆ ಮನವಿ ಮಾಡಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದರೆ ಪ್ರಧಾನಿ ಮೋದಿ ವಿದ್ಯಾರ್ಥಿಗಳು ಹೇಳುವುದನ್ನು ಪರಿಗಣಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


