ಅಮೇರಿಕದಿಂದ ಪಾಕ್- ಭಾರತದ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆಯಾಗಬಾರದು: ಸರ್ತಾಜ್ ಅಜೀಜ್
ಎಲ್ಲಿಯವರೆಗೂ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಉಂಟಾಗುವುದಿಲ್ಲವೋ ಅಲ್ಲಿಯವರೆಗೂ ಪಾಕಿಸ್ತಾನ ಭಾರತ- ಅಮೆರಿಕದ ದ್ವಿಪಕ್ಷೀಯ ಸಂಬಂಧವನ್ನು ವಿರೋಧಿಸುವುದಿಲ್ಲ

ಲಾಹೋರ್: ಎಲ್ಲಿಯವರೆಗೂ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಉಂಟಾಗುವುದಿಲ್ಲವೋ ಅಲ್ಲಿಯವರೆಗೂ ಪಾಕಿಸ್ತಾನ ಭಾರತ- ಅಮೆರಿಕದ ದ್ವಿಪಕ್ಷೀಯ ಸಂಬಂಧವನ್ನು ವಿರೋಧಿಸುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್ ಅಮೆರಿಕ- ಭಾರತದ ದ್ವಿಪಕ್ಷೀಯ ಸಂಬಂಧ ಪಾಕಿಸ್ತಾನ- ಭಾರತದ ಸಂಬಂಧದ ಮೇಲೆ ಪರಿಣಾಮ ಬೀರಬಾರದು. ಇದಕ್ಕೆ ಪೂರಕವಾಗಿ ಅಮೆರಿಕ ಸಹ ಸ್ಪಂದಿಸಿದ್ದು ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ತನಗೆ ಸಮಾನವಾದ ಮಿತ್ರ ರಾಷ್ಟ್ರಗಳೆಂದು ಪಾಕಿಸ್ತಾನ ಹೇಳಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
ಪಾಕಿಸ್ತಾನದ ಹಿತಾಸಕ್ತಿಗಳ ವಿರುದ್ಧವಾಗಿ ಅಮೆರಿಕ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧ ಇರುವುದಿಲ್ಲ, ಎರಡು ರಾಷ್ಟ್ರಗಳು ಅಮೆರಿಕಾಗೆ ಸಮಾನ ಮಿತ್ರ ರಾಷ್ಟ್ರಗಳೆಂದು ಎಂದು ಅಮೆರಿಕ ಸ್ಪಷ್ಟವಾಗಿ ಹೇಳಿದೆ. ಒಂದು ವೇಳೆ ಭಾರತ-ಅಮೆರಿಕದ ದ್ವಿಪಕ್ಷೀಯ ಸಂಬಂಧ, ಭಾರತ-ಪಾಕಿಸ್ತಾನದ ಸಂಬಂಧಕ್ಕೆ ಧಕ್ಕೆ ಉಂಟಾಗುವಂತಿದ್ದರೆ ಅದಕ್ಕೆ ಪಾಕಿಸ್ತಾನ ಪ್ರತ್ಯುತ್ತರ ನೀಡಲಿದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


