ಸಿಬಿಐ ತನಿಖೆಗೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ - ಸಿದ್ದರಾಮಯ್ಯ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಕೆಲ ವಿಚಾರಗಳನ್ನು ಗಣಪತಿಯವರು ಪ್ರಸ್ತಾಪ ಮಾಡಿರುವುದು ಗಮನಕ್ಕೆ ಬಂದಿದೆ. ತನಿಖೆ ಸಂಪೂರ್ಣಗೊಂಡ ನಂತರವಷ್ಟೇ ಸತ್ಯಾಂಶ ಹೊರಬರಬೇಕಿದೆ ಎಂದು ಹೇಳಿದ್ದಾರೆ.
ಜಾರ್ಜ್ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಯಾರ ವಿರುದ್ಧವೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಸತ್ಯಾಂಶ ಹೊರಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


