ಪ್ರಧಾನ ಸುದ್ದಿ

ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಮುಂಗಾರು ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ರಾಜ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ ಪ್ರಕರಣವನ್ನು...

ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್
ಎಂ.ಕೆ.ಗಣಪತಿ - ಕಲ್ಲಪ್ಪ ಹಂಡಿಭಾಗ್
Published On :
ನವದೆಹಲಿ: ಮುಂಗಾರು ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ರಾಜ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ನೀಡುವಂತೆ ಸೋಮವಾರ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಸೂಚಿಸಿದೆ.
ಇತ್ತೀಚಿಗಷ್ಟೇ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಮಂಗಳೂರಿನ ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಶರಣಾಗಿದ್ದರು.
ಈ ಎರಡು ಪ್ರಕರಣಗಳ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಇಂದು ಕೆಪಿಸಿಸಿಗೆ ಸೂಚಿಸಿದೆ.
ಈ ಮಧ್ಯ ಇಂದಿನಿಂದ ಪುನಾರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಮುಖ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರ ಈಗ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.