ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಕೊಡಲ್ಲ: ಸದನದಲ್ಲಿ ಸಿಎಂ ಸ್ಪಷ್ಟನೆ
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Published On :
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 3 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ ಎಂದರು.
ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂಕೆ ಗಣಪತಿ ಆತ್ಮಹತ್ಯೆಯಿಂದ ತುಂಬಾ ದುಃಖವಾಗಿದೆ. ಇಬ್ಬರೂ ಸಹ ಯಂಗ್ ಆಫೀಸರ್ಸ್ಸ್. ಇಬ್ಬರ ಸಾವಿನಿಂದ ಪೊಲೀಸ್ ಇಲಾಖೆಗೆ ನಷ್ಟವಾಗಿದೆ. ಸರ್ಕಾರದ ವತಿಯಿಂದ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಅಲ್ಲದೇ ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ ಎಂದರು.
ರಾಜ್ಯದಲ್ಲಿ ಮಳೆ, ಬೆಳೆ ಆಗಲಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೆಲ್ಲ ಸ್ನೇಹಿತರು, ನೆಂಟರು ಎಲ್ಲರೂ ಆತ್ಮಸ್ಥೈರ್ಯ ತುಂಬಬೇಕು. ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ.ಎಲ್ಲವನ್ನೂ ಜೀವನದಲ್ಲಿ ಎದುರಿಸಬೇಕಾಗುತ್ತದೆ. ದಯಮಾಡಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾವಿರ ವರ್ಷ ಆಯುಸ್ಸು ಎಂದು ಸಿದ್ದರಾಮಯ್ಯ ಹೇಳಿದರು.
ಗಣಪತಿ ಅವರು ಮಾಧ್ಯಮಕ್ಕೆ ನೀಡಿದ್ದು ಕೇವಲ ಹೇಳಿಕೆಯ ಅಷ್ಟೇ. ಆದ್ದರಿಂದ ಅದು ಡೈಯಿಂಗ್ ಡಿಕ್ಲೇರೇಷನ್ ಆಗಲ್ಲ. ಕಿರುಕುಳದ ಬಗ್ಗೆ ಗಣಪತಿ ಮೇಲಾಧಿಕಾರಿಗಳಿಗೆ ದೂರು ಕೊಟ್ಟಿರಲಿಲ್ಲ. ನಮ್ಮ ಸರ್ಕಾರಕ್ಕೂ ಮಾನವೀಯ ಸ್ಪರ್ಶ ಇದೆ. ನಮಗೂ ಮಾನವೀಯತೆ ಇದೆ. ನಮ್ಮ ಹೇಳಿಕೆಯಿಂದ ಗಣಪತಿ ಪತ್ನಿ ಪಾವನಾರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಸಿಆರ್ ಪಿಸಿ 174ಅಲ್ಲ, 154ರ ಅಡಿ ಕೇಸ್ ದಾಖಲಿಸಬೇಕು ಎಂದು ಕುಮಾರಿಸ್ವಾಮಿ ಹೇಳೋದು ಸರಿಯಲ್ಲ. ಗಣಪತಿ ಮಾಧ್ಯಮ ಹೇಳಿಕೆ ಮರಣಪೂರ್ವ ಹೇಳಿಕೆ ಆಗಲ್ಲ.ಗಣಪತಿ ಹೇಳಿಕೆ ಮತ್ತು ಆತ್ಮಹತ್ಯೆಗೆ ಸಂಬಂಧವೇ ಇಲ್ಲ. ಅಂತಹ ಯಾವುದೇ ಚಾನ್ಸ್ ಈ ಕೇಸ್ ನಲ್ಲಿ ಇಲ್ಲ.ಸಿಆರ್ ಪಿಸಿ 154 ಯಾವಾಗ ಬರುತ್ತೆ ಅಂದರೆ. ಗುರುತರ ಅಪರಾಧ ಎಂದು ಶಂಕೆ ಬಂದರೆ ಮಾತ್ರ. ಗಣಪತಿ ಪ್ರಕರಣದಲ್ಲಿ ಗುರುತರ ಅಪರಾಧ ಕಂಡು ಬಂದಿಲ್ಲ. ಈ ಪ್ರಕರಣದಲ್ಲಿ ಕಾಗ್ನಿಜಬಲ್ ಎಂದು ತನಿಖಾಧಿಕಾರಿಗೆ ಕಂಡು ಬಂದರೆ 154ರ ಅಡಿ ಕೇಸ್ ದಾಖಲಿಸಿಕೊಳ್ಳಬಹುದು. ಈ ರೀತಿ ಸಾಕಷ್ಟು ಪ್ರಕರಣಗಳು ಸುಪ್ರೀಂ ತೀರ್ಪಿನಲ್ಲಿದೆ ಎಂದು ಸಿಎಂ ಉಲ್ಲೇಖಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


