ಕೇಂದ್ರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಸುಪ್ರೀಂ ಕೋರ್ಟ್ ತೀರ್ಪು ತಡೆಯಲಿದೆ: ಸೋನಿಯಾ
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇನ್ನು ಮುಂದೆ ಕೇಂದ್ರ ಸರ್ಕಾರ

Published On :
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇನ್ನು ಮುಂದೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಈ ಆದೇಶ ತಡೆಯಲಿದೆ ಎಂದು ಬುಧವಾರ ಹೇಳಿದ್ದಾರೆ.
ಸಂವಿಧಾನದಲ್ಲಿ ನಮೂದಿಸಲಾಗಿರುವ ಪ್ರಜಾಪ್ರಭುತ್ವ ಮೌಲ್ಯಗಳು ಈ ತೀರ್ಪಿನ ಮೂಲಕ ತಳವೂರಲಿರುವ ಭರವಸೆ ವ್ಯಕ್ತಪಡಿಸಿದ್ದಾರೆ ಕಾಂಗ್ರೆಸ್ ಅಧ್ಯಕ್ಷೆ.
"ಈ ತೀರ್ಪು ಇನ್ನುಮುಂದೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ತಡೆಯಲಿದೆ. ಸಂವಿಧಾನ ಮತ್ತು ಪ್ರಜಾಪಭುತ್ವದ ಮೌಲ್ಯಗಳನ್ನು ತುಳಿಯಲು ಪ್ರಯತ್ನಿಸಿದವರನ್ನು ಸೋಲಿಸಲಾಗಿದೆ" ಎಂದು ಅವರು ಹೇಳಿದ್ದಾರೆ.
ಅರುಣಾಚಲ ಪ್ರದೇಶ ಜನರಿಗೆ ಶುಭಾಶಯ ಕೋರಿರುವ ಸೋನಿಯಾ "ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಮತ್ತು ದೇಶದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಲು ನಮ್ಮ ಹೋರಾಟವನ್ನು ಮುಂದುವರೆಸಲಿದ್ದೇವೆ" ಎಂದಿದ್ದಾರೆ.
ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಮುಖಭಂಗವಾದ ತೀರ್ಪಿನಲ್ಲಿ ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯ ಅಸಂವಿಧಾನಕ ಎಂದಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 15, 2015 ಕ್ಕೆ ಮುಂಚಿತವಾಗಿ ಇದ್ದ ಸ್ಥಿತಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


