ಗಣಪತಿ ಆತ್ಮಹತ್ಯೆ ಪ್ರಕರಣ; ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ; ಸಿಎಂ
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ...

Published On :
ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಹಿರಿಯ ಅಧಿಕಾರಿಗಳಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತ್ಮಹತ್ಯೆಗೂ ಮುನ್ನ ಗಣಪತಿ ಹೇಳಿದ್ದು ಸತ್ಯ ಎಂಬ ಮಾಹಿತಿ ಇರುವುದಾಗಿ ಟಿವಿ ಮಾಧ್ಯಮವೊಂದು ವರದಿ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಿಐಡಿ ವರದಿ ಇನ್ನೂ ನನ್ನ ಕೈಸೇರಿಲ್ಲ ಎಂದರು.
ಸಿಐಡಿ ಪ್ರಾಥಮಿಕ ವರದಿ ಇನ್ನೂ ನನ್ನ ಕೈಸೇರಿಲ್ಲ. ತನಿಖೆ ನಡೆಯುತ್ತಿದೆ. ಈ ಸಮಯದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿಎಂ ಹೇಳಿದರು. ಅಲ್ಲದೆ ಸಿಐಡಿ ವರದಿ ಸೋರಿಕೆ ಸಹ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


