ನಿಷ್ಪಕ್ಷಪಾತ ತನಿಖೆಗಾಗಿ ಈಗಾಗಲೇ ರಾಜಿನಾಮೆ ನೀಡಿದ್ದೇನೆ: ಕೆ.ಜೆ.ಜಾರ್ಜ್
ನಿಷ್ಪಕ್ಷಪಾತ ತನಿಖೆಗಾಗಿ ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್...
Published On :
ಬೆಂಗಳೂರು: ನಿಷ್ಪಕ್ಷಪಾತ ತನಿಖೆಗಾಗಿ ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಹೇಳಿದ್ದಾರೆ.
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ನಾನು ಈಗಾಗಲೇ ಸಿಎಂಗೆ ರಾಜಿನಾಮೆ ಪತ್ರ ಸಲ್ಲಿಸಿದ್ದೇನೆ. ನನಗೆ ತನಿಖೆ ಮೇಲೆ ಸಂಪೂರ್ಣ ವಿಶ್ವಾಸವಿದೆ. ತನಿಖೆ ಮುಗಿಯುವವರೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ಮನವಿ ಮಾಡಿರುವುದಾಗಿ ಹೇಳಿದರು.
ಇನ್ನು ಜಾರ್ಜ್ ನೀಡಿದ್ದ ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ರವಾನಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.
ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ, ತನ್ನ ಸಾವಿಗೆ ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಕಾರಣ ಎಂದು ದೂರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

