ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನ
ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಲಖನೌ: ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ಬಿಎಸ್ ಪಿ ಭ್ರಷ್ಟಾಚಾರವೆಸಗಿದೆ ಎಂಬ ಆರೋಪದ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ದಯಾಶಂಕರ್ ಸಿಂಗ್ ಅವರು ಮಾಯಾವತಿ ಅವರನ್ನು ವೈಶ್ಯಗಿಂತಲೂ ಕಡೆ ಎಂದು ಟೀಕಿಸಿದ್ದರು. ಅವರ ಈ ಹೇಳಿಕೆ ಇದೀಗ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಅವರನ್ನೂ ಕೂಡಲೇ ಬಂಧಿಸುವಂತೆ ದೇಶಾದ್ಯಂತ ಬಿಎಸ್ ಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.
ದಯಾಶಂಕರ ಅವರ ಅವಹೇಳನಕಾರಿ ಹೇಳಿಕೆ ವಿರುದ್ಧ ಗೋರಖ್ ಪುರದಲ್ಲಿ ದೂರು ದಾಖಲಾಗಿದ್ದು, ಬಿಜೆಪಿ ಮುಖಂಡ ದಯಾಶಂಕರ್ ಸಿಂಗ್ ರನ್ನು ಯಾವುದೇ ಕ್ಷಣದಲ್ಲಿ ಪೊಲೀಸರು ಬಂಧಿಸಬಹುದು ಎಂಬ ಮಾಹಿತಿ ದೊರೆತಿದೆ. ಮೂಲಗಳ ಪ್ರಕಾರ ಈಗಾಗಲೇ ದಯಾಶಂಕರ ಸಿಂಗ್ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಈ ನಡುವೆ ದಯಾಶಂಕರ ಸಿಂಗ್ ಅವರ ಮೇಲೆ ಬಿಎಸ್ ಪಿ ಕಾರ್ಯಕರ್ತರು ದಾಳಿ ಮಾಡುವ ಭೀತಿ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಲ್ಲಿಯಾದಲ್ಲಿರುವ ಅವರ ಸ್ವಗೃಹಕ್ಕೆ ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪ್ರಸ್ತುತ ದಯಾಶಂಕರ ಸಿಂಗ್ ಅವರು ಎಲ್ಲಿದ್ದಾರೆ ಎಂಬುದು ನಿಗೂಢವಾಗಿದ್ದು, ಲಖನೌ ನಿವಾಸ ಮತ್ತು ಬಲ್ಲಿಯಾದಲ್ಲಿರುವ ನಿವಾಸದಲ್ಲೂ ದಯಾಶಂಕರ ಕುರಿತು ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ವಿವಾದಾತ್ಮಕ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ದಯಾಶಂಕರ ಅವರು ಕ್ಷಮೆ ಯಾಚಿಸಿದರೂ ಕೂಡ ಬಂಧನ ಭೀತಿ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


