ಪ್ರಧಾನ ಸುದ್ದಿ

ಮಹದಾಯಿ ಹೋರಾಟ ಬೆಂಬಲಿಸಿ ಶಾಸಕ ಸ್ಥಾನಕ್ಕೆ ಅಶೋಕ್ ಪಟ್ಟಣ್ ರಾಜಿನಾಮೆ

ರಾಜ್ಯದಲ್ಲಿ ಮಹದಾಯಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದೀಗ ರೈತರ ಹೋರಾಟ ಬೆಂಬಲಿಸಿ ಬೆಳಗಾವಿ ಜಿಲ್ಲೆ...

ಮಹದಾಯಿ ಹೋರಾಟ ಬೆಂಬಲಿಸಿ ಶಾಸಕ ಸ್ಥಾನಕ್ಕೆ ಅಶೋಕ್ ಪಟ್ಟಣ್ ರಾಜಿನಾಮೆ
ಅಶೋಕ್ ಪಟ್ಟಣ್ - ರಾಜಿನಾಮೆ ಪತ್ರ
Published On :
ರಾಮದುರ್ಗ: ರಾಜ್ಯದಲ್ಲಿ ಮಹದಾಯಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದೀಗ ರೈತರ ಹೋರಾಟ ಬೆಂಬಲಿಸಿ ಬೆಳಗಾವಿ ಜಿಲ್ಲೆ ರಾಮದುರ್ಗದ ಕಾಂಗ್ರೆಸ್ ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಳಸಾ ಬಂಡೂರಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಪಟ್ಟಣ್ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ರಾಜಿನಾಮೆ ಪತ್ರ ಬರೆದು ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.
ಅಶೋಕ್ ಪಟ್ಟಣ್ ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಮದ್ಯಾಹ್ನ ತಹಸೀಲ್ದಾರ್ ಮೂಲಕ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರಿಗೆ ರವಾನಿಸಿದ್ದಾರೆ. 
ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ರಾಜಿನಾಮೆ ಪತ್ರವನ್ನು ತಹಸೀಲ್ದಾರ್ ಮೂಲಕ ಸ್ಪೀಕರ್ ಗೆ ರವಾನಿಸಿರುವುದಾಗಿ ಅಶೋಕ್ ಪಟ್ಟಣ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.