ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನ
ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.

Published On :
ಬೆಂಗಳೂರು: ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೇಷ್ಠ ಪುತ್ರ ರಾಕೇಶ್(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದ ಬೆಲ್ಜಿಯಂನ ಬ್ರಷಲ್ಸ್ ನ ಆಂಟ್ ವರ್ಪ್ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಕೇಶ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ 39 ವರ್ಷದ ರಾಕೇಶ್ ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಪುತ್ರನ ಆರೋಗ್ಯ ವಿಚಾರಿಸಲು ಬೆಲ್ಜಿಯಂಗೆ ತೆರಳಿದ್ದರು.
ವಿಶೇಷ ವಿಮಾನದ ಮೂಲಕ ನಾಳೆ ಸಂಜೆ ರಾಕೇಶ್ ಅವರ ಪಾರ್ಥಿವ ಶರೀರವನ್ನು ನೇರವಾಗಿ ಮೈಸೂರಿಗೆ ಕೊಂಡಯ್ಯಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ತಿಳಿಸಿವೆ.
ಇನ್ನು ಸಿಎಂ ಪುತ್ರನ ಅಕಾಲಿಕ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು, ರಾಕೇಶ್ ಸಾವು ತೀವ್ರ ಆಘಾತದ ವಿಚಾರ ಎಂದು ಹೇಳಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಅಂತ್ಯಕ್ರಿಯೆ
ರಾಕೇಶ್ ಅವರ ಅಂತ್ಯಕ್ರಿಯೆ ಸೋಮವಾರ ಮೈಸೂರು ಸಮೀಪದ ಟಿ.ಕಾಟೂರು ಫಾರಂನಲ್ಲಿ ನಡೆಯಲಿದೆ ಎಂದು ಸಚಿವ ಮಹದೇವ ಪ್ರಸಾದ್ ಅವರು ತಿಳಿಸಿದ್ದಾರೆ.
ಗಣ್ಯರ ಸಂತಾಪ
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಸಿಎಂ ಪುತ್ರನ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅಗತ್ಯ ನೆರವನ್ನು ಒದಗಿಸುವಂತೆ ಭಾರತದ ರಾಯಭಾರಿ ಮಂಜಿತ್ ಪುರಿ ಅವರಿಗೆ ಪ್ರಧಾನಿ ಅವರು ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


