ಪ್ರಧಾನ ಸುದ್ದಿ

ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ತೀವ್ರ ಅನಾರೋಗ್ಯದಿಂದ ಶನಿವಾರ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಲ್ಜಿಯಂನಿಂದ ಮೈಸೂರಿನತ್ತ ಪಯಣ ಆರಂಭಿಸಿದ್ದು, ಸೋಮವಾರ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ
ರಾಕೇಶ್ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ನವದೆಹಲಿ: ತೀವ್ರ ಅನಾರೋಗ್ಯದಿಂದ ಶನಿವಾರ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಲ್ಜಿಯಂನಿಂದ ಮೈಸೂರಿನತ್ತ ಪಯಣ ಆರಂಭಿಸಿದ್ದು, ಸೋಮವಾರ  ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಬೆಲ್ಜಿಯಂನ ಬ್ರುಸೆಲ್ಸ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ರಾಕೇಶ್ ಅವರ ಪಾರ್ಥೀವ ಶರೀರವನ್ನು ತೆಗೆದುಕೊಂಡು ಬರಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ  ಕುಟುಂಬ ಕೂಡ ಮೈಸೂರಿನತ್ತ ಪಯಣ ಬೆಳೆಸಿದ್ದಾರೆ.

ಇನ್ನು ಮೈಸೂರಿನಲ್ಲಿ ರಾಕೇಶ್ ಸಿದ್ದರಾಮಯ್ಯ ಅವರ ಅಂತ್ಯ ಸಂಸ್ಕಾರಕ್ಕೆ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗಿದ್ದು, ಮೈಸೂರಿನ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ  ರಾಕೇಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ  ನೀಡಲಾಗಿದ್ದು, 1.30ರ ಬಳಿ ಮೈಸೂರಿನ ಟಿ.ಕಾಟೂರಿನ ಸಿದ್ದರಾಮಯ್ಯ ಕುಟುಂಬದ ಮಾಲೀಕತ್ವದ ತೋಟದ ಮನೆಯಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ.

ತಂದೆ ಸಾವಿನ ವಿಷಯವೇ ತಿಳಿಯದ ಮಕ್ಕಳು
ಇನ್ನು ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ವಿಚಾರ ಅವರ ಮಕ್ಕಳಾದ ಪವನ್ ಹಾಗೂ ತನ್ಮಯಿಗೆ ತಿಳಿಸಿಲ್ಲವಂತೆ. ಪ್ರಸ್ತುತ ಬೆಂಗಳೂರಿನ ಮನೆಯಲ್ಲಿ ತಮ್ಮ ಅಜ್ಜಿಯೊಂದಿಗಿರುವ  ಮಕ್ಕಳಾದ ಪವನ್ ಹಾಗೂ ತನ್ಮಯಿ ತಮ್ಮ ತಂದೆ ಮನೆಗೆ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರಂತೆ. ಈ ವರೆಗೂ ಅವರಿಗೆ ಟಿವಿ ತೋರಿಸಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಜುಲೈ 21ರಂದು ಸ್ನೇಹಿತರೊಂದಿಗೆ ಬೆಲ್ಜಿಯಂಗೆ ತೆರಳಿದ್ದ ರಾಕೇಶ್ ಸಿದ್ದರಾಮಯ್ಯ ಅವರು, ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ  ಫಲಕಾರಿಯಾಗದೇ ನಿನ್ನೆ ಅವರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.