ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ ಶಾಸಕರು: ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಮುಂದೂಡಿಕೆ ಸಾಧ್ಯತೆ
ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ಮತಕ್ಕಾಗಿ ಹಣದ ಬೇಡಿಕೆಯಿಟ್ಟಿರುವುದು...

Published On :
ಬೆಂಗಳೂರು: ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ಮತಕ್ಕಾಗಿ ಹಣದ ಬೇಡಿಕೆಯಿಟ್ಟಿರುವುದು ಬಹಿರಂಗವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಮುಂದೂಡುವ ಸಾಧ್ಯತೆ ಇದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಜಾ ಅವರು, ಮತಕ್ಕಾಗಿ ಲಂಚ ಸ್ಟಿಂಗ್ ಆಪರೇಷನ್ ಅನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಆಯೋಗ ಮೌಖಿಕವಾಗಿ ಸೂಚಿಸಿದೆ ಎಂದಿದ್ದಾರೆ.
ಇಂಡಿಯಾ ಟುಡೇ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ನಾಲ್ವರು ಶಾಸಕರು ರಾಜ್ಯಸಭೆಯ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ತಲಾ ಐದು ಕೋಟಿ ರುಪಾಯಿ ಡಿಮಾಂಡ್ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸಭೆ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್, ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


