ಪ್ರಧಾನ ಸುದ್ದಿ

ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ

ಹಗರಣದ ಸುಳಿಯಲ್ಲಿ ಸಿಕ್ಕಿದ್ದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ
ರಾಜೀನಾಮೆ ಸಲ್ಲಿಸಿದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ
Published On :

ಮುಂಬೈ: ಹಗರಣದ ಸುಳಿಯಲ್ಲಿ ಸಿಕ್ಕಿದ್ದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ, ಖಾಡ್ಸೆ ಅವರ ಅಕ್ರಮ ಭೂ ವ್ಯವಹಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಹಾ ಬಿಜೆಪಿಯಿಂದ ವರದಿ ಕೇಳಿದ್ದರು.

ಅಲ್ಲದೆ, ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರನ್ನು ಕೂಡಲೇ ಬಂಧಿಸದಿದ್ದರೆ,  ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯೆ ಅಂಜಲಿ ದಮಾನಿಯಾ ಕೂಡ ಎಚ್ಚರಿಸಿದ್ದರು.

ಆದುದರಿಂದ ಖಾಡ್ಸೆ ಜೊತೆಗೆ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ, ರಾಜೀನಾಮೆಯೇ ಸೂಕ್ತ ಎಂದು ಮನವೊಲಿಸಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.