ಪ್ರಧಾನ ಸುದ್ದಿ

ನೀವು ಸಿಪಾಯಿ ದಂಗೆಯನ್ನು ಬಯಸುತ್ತೀರಾ? ಪತ್ರಕರ್ತರ ವಿರುದ್ಧ ಪರಂ ಗರಂ

ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...

ನೀವು ಸಿಪಾಯಿ ದಂಗೆಯನ್ನು ಬಯಸುತ್ತೀರಾ? ಪತ್ರಕರ್ತರ ವಿರುದ್ಧ ಪರಂ ಗರಂ
ಜಿ.ಪರಮೇಶ್ವರ
Published On :
ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾದ ಪೊಲೀಸರನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಅಭಿನಂದಿಸಿದ್ದಾರೆ.
ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪರಮೇಶ್ವರ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪೊಲೀಸರು ಪ್ರತಿಭಟನೆ ನಡೆಸಿಲ್ಲ. ನಮ್ಮ ಮನವಿ ಸ್ಪಂದಿಸಿ ಪ್ರತಿಭಟನೆಯನ್ನು ಹಿಂಪಡೆದ ಪೊಲೀಸ್ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.
ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಶಿಧರ ಅವರ ಪತ್ನಿ ಹಾಗೂ ವಾಟಾಳ್ ನಾಗರಾಜ್ ಅವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.
ಇದೇ ವೇಳೆ ಪತ್ರಕರ್ತರೊಬ್ಬರು ಪ್ರತಿಭಟನೆಗೆ ಕರೆ ನೀಡಿದ್ದ ಅಖಿಲ ಕರ್ನಾಟ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ ಅವರ ಬಂಧನದ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪರಮೇಶ್ವರ್‌ ಅವರು ಶಶಿಧರ್‌ ಅವರು ಫೇಸ್‌ಬುಕ್‌ನಲ್ಲಿ ಗೃಹ ಇಲಾಖೆಯ ವಿರುದ್ಧ ಸಿಪಾಯಿ ದಂಗೆ ನಡೆಸುವುದಾಗಿ ಬರೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ರಾಜದ್ರೋಹದಡಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದರು.
ಈ ವೇಳೆ ಪತ್ರಕರ್ತರೊಬ್ಬರು ಸಿಪಾಯಿ ದಂಗೆಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲವೇ ಎಂದಿದ್ದಾರೆ. ಇದರಿಂದ ಗರಂ ಆದ ಪರಮೇಶ್ವರ ಅವರು, ನೀವು ಸಿಪಾಯಿ ದಂಗೆಯನ್ನು ಬಯಸುತ್ತೀರಾ? ಬಯಸುವುದಾರೆ ಬಯಸಿ .. ಶಶಿಧರ್‌ ಇರುವ ಕಡೆ ನಿವೂ ಹೋಗ್ತೀರಾ... ಎಂದು ಪರೋಕ್ಷವಾಗಿ ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪೊಲೀಸ್‌ ಇಲಾಖೆಯಲ್ಲಿ ಅಧಿಕಾರಿಗಳ ವರ್ತನೆ, ವೇತನತಾರತಮ್ಯ, ವಸತಿ ಗೃಹಗಳ ಸಮಸ್ಯೆ, ಕೈಗೆ ಸಿಗದ ಆರೋಗ್ಯ ಭಾಗ್ಯ ಯೋಜನೆ ಹಲವು ಸಮಸ್ಯೆಗಳಿಂದ ರೋಸಿಹೋದ ಸಿಬ್ಬಂದಿ, ಜೂನ್‌ 4ರಂದು ಕರ್ತವ್ಯಕ್ಕೆ ಸಾಮೂಹಿಕವಾಗಿ ಗೈರುಹಾಜರಾಗುವ ಮೂಲಕ ಪ್ರತಿಭಟನೆಯ ಸಂದೇಶವನ್ನು ಸರ್ಕಾರಕ್ಕೆ ರವಾನಿಸಲು ನಿರ್ಧರಿಸಿದ್ದರು. ಬೆನ್ನಲ್ಲೇ ಸರ್ಕಾರ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಿ, ಮಣಿಯದ ಸಿಬ್ಬಂದಿಗೆ ಶಿಸ್ತುಕ್ರಮದ ಎಚ್ಚರಿಕೆ ಸಂದೇಶಗಳನ್ನೂ ರವಾನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.