ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆ: ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ
ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಬೆಂಗಳೂರು: ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ನಗರದಲ್ಲಿ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದ್ದ ಪೊಲೀಸರ ಸಾಮೂಹಿಕ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತರ ಘಟನೆ ನಡೆಸದಂತೆ ಅಧಿಕಾರಿಗಲು ತೀವ್ರ ಕಟ್ಟೆಚ್ಚರವನ್ನು ಕೈಗೊಂಡಿದ್ದಾರೆ. ಇದರಂತೆ ಭದ್ರತೆಗಾಗಿ ಸಿಆರ್ ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಪ್ರತಿಭಟನೆ ನಡೆಸದಂತೆ ಪೊಲೀಸರ ಮನವೊಲಿಕೆಗೆ ಅಧಿಕಾರಿಗಳು ಹಲವಾರು ಕಸರತ್ತುಗಳನ್ನು ನಡೆಸಿದ್ದಾರೆ.
ಇದೀಗ ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರತಿಭಟನೆ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಪೊಲೀಸರು ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹ ರಕ್ಷಕದಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇನ್ನು ಪ್ರತಿಭಟನೆ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು, ರಾಜ್ಯದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯುವುದಿಲ್ಲ. ಪೊಲೀಸರ ಪ್ರತಿಭಟನೆ ಹಾಗೂ ಸಮಸ್ಯೆ ವಿಚಾರ ನಮ್ಮ ಮನೆಯ ವಿಚಾರವಾಗಿದ್ದು, ನಮ್ಮ ಮನೆಯ ಸಮಸ್ಯೆಯನ್ನು ನಾವು ಬಗೆಹರಿಸಿಕೊಂಡಿದ್ದೇವೆ. ಇದೀಗ ಶೇ.100ಕ್ಕೆ ನೂರರಷ್ಟು ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಎಲ್ಲಾ ಶ್ರೇಣಿಯ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


