ಪ್ರಧಾನ ಸುದ್ದಿ

ಭಾರತದ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು ಬದ್ಧ: ಅಮೆರಿಕ ಭರವಸೆ

ಭವಿಷ್ಯದಲ್ಲಿ ಭಾರತ ಪ್ರಬಲವಾಗಿ ಬೆಳೆಯಲು ಅದರ ರಕ್ಷಣಾ ಸಾಮರ್ಥ್ಯ ವೃದ್ಧಿಗೆ ಅಮೆರಿಕ ನೆರವು ನೀಡಲಿದೆ ಎಂದು ಒಬಾಮ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು ಬದ್ಧ: ಅಮೆರಿಕ ಭರವಸೆ
ಭಾರತದ ರಕ್ಷಣಾ ಸಾಮರ್ಥ್ಯ (ಸಾಂದರ್ಭಿಕ ಚಿತ್ರ)
Published On :

ವಾಷಿಂಗ್ಟನ್: ಭವಿಷ್ಯದಲ್ಲಿ ಭಾರತ ಪ್ರಬಲವಾಗಿ ಬೆಳೆಯಲು ಅದರ ರಕ್ಷಣಾ ಸಾಮರ್ಥ್ಯ ವೃದ್ಧಿಗೆ ಅಮೆರಿಕ ನೆರವು ನೀಡಲಿದೆ ಎಂದು ಒಬಾಮ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಕಚೇರಿಯಿಂದ ಇಂತಹ ಹೇಳಿಕೆ ಬಂದಿದ್ದು, ಭಾರತ ಬಲಾಢ್ಯ ರಾಷ್ಟ್ರವಾಗಿ ಅಭಿವೃದ್ಧಿ  ಹೊಂದುತ್ತಿದೆ. ಹಾಗಾಗಿ ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ಅಗತ್ಯವಿದೆ. ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿ ಬೆಳೆಯಲು ಅಗತ್ಯವಾದ ರಕ್ಷಣಾ  ಸಾಮರ್ಥ್ಯ ವೃದ್ಧಿಗೆ ಅಮೆರಿಕ ನೆರವು ನೀಡಲು ಬದ್ಧ ಎಂದು ಅಮೆರಿಕದ ಹಿರಿಯ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಭಾರತಕ್ಕೆ ರಕ್ಷಣಾ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಅಮೆರಿಕ ಅಗತ್ಯ ನೆರವು ನೀಡಲಿದ್ದು, ತನ್ನ ಪ್ರದೇಶದ ಜತೆಯಲ್ಲೇ ಹಿಂದೂ ಮಹಾಸಾಗರ ಪ್ರದೇಶವನ್ನೂ ಭಾರತವನ್ನು ರಕ್ಷಿಸುವ ಸಾಮರ್ಥ್ಯ  ಹೊಂದುವಂತೆ ಮಾಡುವುದು ಅಮೆರಿಕದ ಉದ್ದೇಶವಾಗಿದೆ. ಹಿಂದೂ ಮಹಾಸಾಗರದಲ್ಲಿ ರಕ್ಷಣೆಗೆ ಯಾವುದೇ ಹಾನಿ ಸಂಭವಿಸದಂತೆ ತಡೆಯಲು ಅಮೆರಿಕ ಭಾರತಕ್ಕೆ ಅಗತ್ಯ ನೆರವು ನೀಡಲಿದೆ  ಎಂದು ಅವರು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಾಗುತ್ತಿದೆ. ಇದನ್ನು ಆದಷ್ಟು ವಿಸ್ತರಿಸುವುದು ನಮ್ಮ ಗುರಿಯಾಗಿದ್ದು, ಈ ಸಂಬಂಧ ಭಾರತಕ್ಕೆ ಬೇಕಾದ ಎಲ್ಲ ನೆರವನ್ನು  ನೀಡಲು ಅಮೆರಿಕ ಸರ್ಕಾರ ಸಿದ್ಧ ಎಂದು ಅಮೆರಿಕ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.