ಪ್ರಧಾನ ಸುದ್ದಿ

ಡಿವೈಎಸ್ ಪಿ ಅನುಪಮಾ ಶೆಣೈ ಪರ ಹೋರಾಡಿ:ಎಚ್ ಡಿಕೆ

ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ಕೂಡ್ಲಿಗಿ ಡಿವೈಎಸ್ ಪಿ ಸ್ಥಾನಕ್ಕೆ ರಾಜಿನಾಮೆ ನೀಡಿ,....

ಡಿವೈಎಸ್ ಪಿ ಅನುಪಮಾ ಶೆಣೈ ಪರ ಹೋರಾಡಿ:ಎಚ್ ಡಿಕೆ
ಎಚ್.ಡಿ.ಕುಮಾರಸ್ವಾಮಿ
Published On :
ಮೈಸೂರು: ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ಕೂಡ್ಲಿಗಿ ಡಿವೈಎಸ್ ಪಿ ಸ್ಥಾನಕ್ಕೆ ರಾಜಿನಾಮೆ ನೀಡಿ, ಭ್ರಷ್ಟಚಾರ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುತ್ತಿರುವ ಅನುಪಮಾ ಶೆಣೈ ಪರವಾಗಿ ರಾಜ್ಯದ ಜನತೆ ಹೋರಾಟಕ್ಕೆ ಇಳಿಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿಕೆ, ಅನುಪಮಾ ಶೆಣೈ ರಾಜಿನಾಮೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 
ಅನುಪಮಾ ಶೆಣೈ ಭ್ರಷ್ಟ ಆಡಳಿತ ವ್ಯವಸ್ಥೆಯ ವಿರುದ್ಧ ಬೇಸತ್ತು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭ್ರಷ್ಟರನ್ನು ರಕ್ಷಿಸುತ್ತಿರುವ ಸರ್ಕಾರದ ವಿರುದ್ಧ ಜನ ಹೋರಾಟ ನಡೆಸಬೇಕು ಎಂದಿದ್ದಾರೆ.
ತಮ್ಮ ಫೇಸ್‍ಬುಕ್ ನಲ್ಲಿ ಕುಮಾರಸ್ವಾಮಿ ಅವರ ಬಗ್ಗೆ ಬರೆದ ಅನುಪಮಾ ಶೆಣೈ, ನಗುವ ಹೆಂಗಸನ್ನು ನಂಬಬಾರದು ಎಂದು ಈ ಹಿಂದೆ ಕುಮಾರಸ್ವಾಮಿಯವರು ಹೇಳಿದ್ದರು. ಆ ನಗುವಿನ ಹಿಂದಿನ ನೋವನ್ನು ತೆನೆ ಹೊತ್ತ ಮಹಿಳೆ ಚೆನ್ನಾಗಿ ಬಲ್ಲಳು ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.