ಪ್ರಧಾನ ಸುದ್ದಿ

ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ, ಲಕ್ಷಾಂತರ ರು,ಮೌಲ್ಯದ ಲಡ್ಡು ಭಸ್ಮ

ವಿಶ್ವ ವಿಖ್ಯಾತ ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,

ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ, ಲಕ್ಷಾಂತರ ರು,ಮೌಲ್ಯದ ಲಡ್ಡು ಭಸ್ಮ
ತಿರುಪತಿ ತಿರುಮಲ ದೇವಸ್ಥಾನದ ಅಡುಗೆ ಮನೆ
Published On :
ತಿರುಪತಿ: ವಿಶ್ವ ವಿಖ್ಯಾತ ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರುಪಾಯಿ ಮೌಲ್ಯದ ಲಡ್ಡುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.
ಇಂದು ಬೆಳಗ್ಗೆ ಲಡ್ಡುಗಳನ್ನು ತಯಾರಿಸುವ ಅಡುಗೆ ಮನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಡುಗೆ ಸಿಬ್ಬಂದಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಡ್ಡು ತಯಾರಿಸುವ ಅಡುಗೆ ಮನೆಯಲ್ಲಿ ತುಪ್ಪ ಕಾಯಿಸುತ್ತಿದ್ದಾಗ ವಿಪರೀತ ಬಿಸಿಯಿಂದಾಗಿ ಗೋಡೆಗೆ ಬೆಂಕಿ ತಗುಲಿಕೊಂಡಿದೆ ಎಂದು ತಿರುಪತಿ ತಿರುಮಲ ದೇವಸ್ಥಾನದ ಪಿಆರ್ ಒ ತಲರಿ ರವಿ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. 
ಬೆಂಕಿ ಆಕಸ್ಮಿಕದಿಂದಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ; ಆದರೆ  ಅಂದಾಜು 20 ಲಕ್ಷ ರುಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.