ಜೂ.16 -17 ರಂದು ರಾಜ್ಯ ಇಂಧನ ಸಚಿವರ ಸಮ್ಮೇಳನ
ಜೂ.16 -17 ರಂದು ಗೋವಾದಲ್ಲಿ ನಡೆಯಲಿರುವ ಎರಡು ದಿನಗಳ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳ ಇಂಧನ ಸಚಿವರು ಭಾಗವಹಿಸಲಿದ್ದಾರೆ.

ನವದೆಹಲಿ: ಜೂ.16 -17 ರಂದು ಗೋವಾದಲ್ಲಿ ನಡೆಯಲಿರುವ ಎರಡು ದಿನಗಳ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳ ಇಂಧನ ಸಚಿವರು ಭಾಗವಹಿಸಲಿದ್ದಾರೆ.
ಕೇಂದ್ರ ಇಂಧನ, ಕಲ್ಲಿದ್ದಲು ಖಾತೆ ಸಚಿವ ಪಿಯೂಷ್ ಗೋಯಲ್ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಎಲ್ಲಾ ರಾಜ್ಯಗಳ ಇಂಧನ ಸಚಿವರು ಹಾಗೂ ಇಂಧನ ಇಲಾಖೆ ಕಾರ್ಯದರ್ಶಿಗಳು ಸಮ್ಮೇಳನದಲ್ಲಿ ಭಾಗವಹಿಸಲ್ಲಿದ್ದಾರೆ ಎಂದು ಕೇಂದ್ರ ಇಂಧನ ಖಾತೆ ಸಚಿವಾಲಯ ತಿಳಿಸಿದೆ. ಸಮ್ಮೇಳನದಲ್ಲಿ ಪ್ರಸ್ತುತ ಜಾರಿಯಾಗಿರುವ ಯೋಜನೆಗಳ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ವಿದ್ಯುತ್, ಕಲ್ಲಿದ್ದಲು ಹಾಗೂ ನವೀಕರಿಸಬಹುದಾದ ಶಕ್ತಿ ಬಗ್ಗೆ ಚರ್ಚೆ ನಡೆಯಲಿದ್ದು ರಾಜ್ಯವಾರು ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


