ಕೊಲೆ ಪ್ರಕರಣ ಸಂಬಂಧ ಎಸ್ಪಿ ಮೇಲೆ ಬಿಎಸ್ ವೈ ಒತ್ತಡ? ವಿಡಿಯೋ ವೈರಲ್
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈಗ ಹೊಸ ವಿವಾದಕ್ಕೆ ಸಿಲುಕಿದ್ದು, ಹಾಸನ ಜಿಲ್ಲೆಯಲ್ಲಿ ನಡೆದ ಕೊಲೆ...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈಗ ಹೊಸ ವಿವಾದಕ್ಕೆ ಸಿಲುಕಿದ್ದು, ಹಾಸನ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರಿಗೆ ಕಿರುಕುಳ ನೀಡದಂತೆ ಪೊಲೀಸ್ ಅಧಿಕಾರಿಗಳಿಗೆ ಒತ್ತಡ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
'ನೀನು ಈಗಾಗಲೇ 14-15 ಹಿಂದೂ ಯುವಕರನ್ನು ಬಂಧಿಸಿದ್ದಿಯಾ, ಅಲ್ಲದೆ ಇನ್ನೂ ಕೆಲವರಿಗೆ ಕಿರುಕುಳ ನೀಡುತ್ತಿದ್ದೀಯಾ. ಆದರೆ ಮುಂದೆ ಇಂತಹ ಕೆಲಸಗಳನ್ನು ಮಾಡಬೇಡ. ಅರಿಸಿಕೆರೆಲ್ಲಿ ಪರಿಸ್ಥಿತಿ ನೆಟ್ಟಗಿರಲ್ಲ. ಶಾಂತಿ ಕದಡಬಹುದು' ಎಂದು ವಿಡಿಯೋದಲ್ಲಿ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಅವರಿಗೆ ಬಿಎಸ್ ವೈ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಅವರು ಈ ವಿಡಿಯೋವನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಸಾರ್ವಜನಿಕ ಜೀವನದಲ್ಲಿರುವ ಒಬ್ಬ ವ್ಯಕ್ತಿ, ಅದು ಬಿಜೆಪಿ ನಾಯಕರೊಬ್ಬರು ಈ ರೀತಿ ಮಾಡುವುದು ತಪ್ಪು ಎಂದು ಬರೆದಿದ್ದಾರೆ.
ಇದು ಯಡಿಯೂರಪ್ಪ ಅವರು ಕೊಲೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಬ್ರಿಜೇಶ್ ಕಾಳಪ್ಪ ಅವರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


