ಕಾಶ್ಮೀರದಲ್ಲೂ ನಡೆಯಿತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಕಣಿವೆ ರಾಜ್ಯ ಕಾಶ್ಮೀರದಲ್ಲೂ ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.

ಜಮ್ಮು/ ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲೂ ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.
ಮೌಲಾನ ಆಜಾದ್ ಸ್ಟೇಡಿಯಂ ನಲ್ಲಿ ಯೋಗ ದಿನಾಚರಣೆ ನಡೆದಿದ್ದು, ನೂರಾರು ಜನರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಯೋಗ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಪೈಕಿ ಬಹುತೇಕ ಯುವಕ ಯುವತಿಯರಿದ್ದರು.
ಮೌಲಾನಾ ಆಜಾದ್ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮದ ಮಾದರಿಯಲ್ಲೇ ಶ್ರೀನಗರದ ಲೇಹ್, ಲಡಾಕ್ ಹಾಗೂ ಕಾರ್ಗಿಲ್ ನಲ್ಲೂ ಯೋಗ ದಿನಾಚರಣೆ ನಡೆದಿದೆ. ಇನ್ನು ಜಮ್ಮು ಪ್ರದೇಶದಲ್ಲಿರುವ ಉಧಂಪುರದ ಸೇನಾ ಪ್ರಧಾನ ಕಚೇರಿಯಲ್ಲೂ ಸಹ ಯೋಧರು ಯೋಗ ದಿನವನ್ನು ಆಚರಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಸೇನಾ ಅಧಿಕಾರಿಯೊಬ್ಬರು, ಯೋಗ ಸೇನೆಯಲ್ಲಿರುವವರ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


