ಇತಿಹಾಸ ಬರೆದ ಭಾರತ; ಏಕಕಾಲಕ್ಕೆ 20 ಉಪಗ್ರಹಗಳ ಉಡಾವಣೆ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಗೂಗಲ್ ನಿರ್ಮಿತ ಉಪಗ್ರಹ ಸೇರಿದಂತೆ ಏಕಕಾಲಕ್ಕೆ ಬರೊಬ್ಬರಿ 20 ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಿದೆ.

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಗೂಗಲ್ ನಿರ್ಮಿತ ಉಪಗ್ರಹ ಸೇರಿದಂತೆ ಏಕಕಾಲಕ್ಕೆ ಬರೊಬ್ಬರಿ 20 ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಿದೆ.
ಆಂಧ್ರ ಪ್ರದೇಶದಶ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ ಎಲ್ ವಿ-ಸಿ34 ಉಡಾವಣಾ ವಾಹಕವವನ್ನು ಇಂದು ಬೆಳಗ್ಗೆ 9.26ರಲ್ಲಿ ಉಡಾವಣೆ ಮಾಡಲಾಗಿದ್ದು, ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಪಿಎಸ್ ಎಲ್ ವಿ ಸಿ-34 ಉಡಾವಣಾ ವಾಹಕ ಎಲ್ಲ ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಆ ಮೂಲಕ ಏಕಕಾಲಕ್ಕೆ ಬರೊಬ್ಬರಿ 20 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸಿದ ವಿಶ್ವದ 2ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


