ಪ್ರಧಾನ ಸುದ್ದಿ

ಮೋದಿ ಮೌನ ಸ್ವಾಮಿ ಹೇಳಿಕೆಯನ್ನು ಒಪ್ಪಿಕೊಂಡಿರುವಂತಿದೆ: ಕಾಂಗ್ರೆಸ್

ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸರಣಿಯಾಗಿ ಹೇಳಿಕೆ ನೀಡುತ್ತಿದ್ದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ವಹಿಸಿರುವುದನ್ನು...

ಮೋದಿ ಮೌನ ಸ್ವಾಮಿ ಹೇಳಿಕೆಯನ್ನು ಒಪ್ಪಿಕೊಂಡಿರುವಂತಿದೆ: ಕಾಂಗ್ರೆಸ್
ಕಾಂಗ್ರೆಸ್‌ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸರಣಿಯಾಗಿ ಹೇಳಿಕೆ ನೀಡುತ್ತಿದ್ದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ವಹಿಸಿರುವುದನ್ನು ನೋಡಿದರೆ, ಸ್ವಾಮಿ ಅವರ ಹೇಳಿಕೆಯನ್ನು ಒಪ್ಪಿಕೊಂಡಿರುವಂತಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್‌ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೆಲ ನಾಯಕರನ್ನು ಗುರಿ ಮಾಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾಮಿ ಅವರನ್ನು ರಾಜ್ಯಸಭೆಗೆ ಕರೆತಂದಿದ್ದರು. ಆದರೆ, ಇದೀಗ ಅವರ ಬಾಣ ಅವರಿಗೆ ತಿರುಗುಬಾಣವಾಗಿದೆ ಎಂದು ಹೇಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿಯವರು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸರಣಿಯಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತ್ರ ಈ ಬಗ್ಗೆ ಯಾವುದೇ ಸ್ಪಷ್ಟನೆಗಳನ್ನು ನೀಡುತ್ತಿಲ್ಲ. ಇನ್ನು ಮುಂದೆಯೂ ಮೋದಿಯವರು ಇದೇ ರೀತಿಯಾಗಿ ಮೌನ ವಹಿಸಿದ್ದೇ ಆದರೆ, ಸ್ವಾಮಿ ಅವರ ಹೇಳಿಕೆಯನ್ನು ಅವರು ಒಪ್ಪಿಕೊಂಡಂತಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ ಭಾರತದ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ನೇಮಕ ಕುರಿತಂತೆ ಕಿಡಿಕಾರಿದ್ದ ಸುಬ್ರಮಣಿಯನ್ ಸ್ವಾಮಿಯವರು, ಅಮೆರಿಕದ ಔಷಧೀಯ ಹಿತಾಸಕ್ತಿಗಳನ್ನು ಸಂರಕ್ಷಿಸಿಕೊಳ್ಳಲು ಅಮೆರಿಕ ಭಾರತದ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯಾರು ಹೇಳಿದ್ದು? ಇದನ್ನು ಹೇಳಿದ್ದು, ಅರವಿಂದ ಸುಬ್ರಮಣಿಯನ್ ಅವರೇ ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ತೆಗೆದುಹಾಕಬೇಕು. ಭಾರತದಲ್ಲಿ ಬೌದ್ಧಿಕ ಆಸ್ತಿ ಹಕ್ಕು ಜಾರಿಗೊಳಿಸುವುದು ಬೇಡ ಎಂಬುದು ಅರವಿಂದ್ ಅವರ ಆಶಯವಾಗಿತ್ತು. ದೇಶದ ಆರ್ಥಿಕ ಅಭಿವೃದ್ಧಿ ಕುಸಿಯಲು ರಾಜನ್ ಹಾಗೂ ಅರವಿಂದ ಸುಬ್ರಮಣಿಯನ್ ಅವರು ಉದ್ದೇಶಪೂರ್ವಕವಾಗಿ ಯತ್ನಿಸುತ್ತಿದ್ದಾರೆಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.