ಹಿಜ್ಬುಲ್ ಉಗ್ರನ ಹತ್ಯೆ; ಕಾಶ್ಮೀರದಲ್ಲಿ ತೀವ್ರ ಪ್ರತಿಭಟನೆ
ಭದ್ರತಾ ಪಡೆತೆಗಳು ಗುಂಡೇಟಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಭಯೋತ್ಪಾದಕನೊಬ್ಬ ಹಾತೆಯಾದ ಸುದ್ದಿ ಹರಡಿದಂತೆ ಸೋಪೋರ್

Published On :
ಶ್ರೀನಗರ: ಭದ್ರತಾ ಪಡೆತೆಗಳು ಗುಂಡೇಟಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಭಯೋತ್ಪಾದಕನೊಬ್ಬ ಹಾತೆಯಾದ ಸುದ್ದಿ ಹರಡಿದಂತೆ ಸೋಪೋರ್ ನಲ್ಲಿ ಉಗ್ರ ಪ್ರತಿಭಟನೆಗಳು ನಡೆದಿವೆ.
ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕುಪ್ವಾರ ಜಿಲ್ಲೆಯ ನಗ್ರಿ ಗ್ರಾಮದಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರೆದಿದ್ದರಿಂದ ನಡೆದ ಗುಂಡಿನ ಕಾಳಗದಲ್ಲಿ ಸಮೀರ್ ವಾನಿ ಎಂಬ ಉಗ್ರ ಮಂಗಳವಾರ ಹತ್ಯೆಯಾಗಿದ್ದನು.
ಉಗ್ರರು ಅಡಗಿದ್ದ ಮನೆಯಿಂದ ಭದ್ರತಾ ಪಡೆಗಳ ಮೇಲೆ ತೀವ್ರ ಗುಂಡಿನ ದಾಳಿ ನಡೆದಿದ್ದರಿಂದ ಭದ್ರತಾ ಪಡೆಗಳು ನೀಡಿದ ಪ್ರತಿಕ್ರಿಯೆಗೆ ವಾನಿ ಹತ್ಯೆಯಾದ. ಅವನು ಉತ್ತರ ಕಾಶ್ಮೀರದ ಹಿಜ್ಬುಲ್ ವಿಭಾಗೀಯ ಕಮಾಂಡರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಾನಿ ಹತ್ಯೆಯಾದ ಸುದ್ದಿ ಹಬ್ಬಿದಂತೆ ಸೋಪೋರ್ ನ ಗ್ರಾಮವಾದ ದೂರುವಿನಲ್ಲಿ ನೂರಾರು ಜನ ಹೊರಗೆ ಬಂದು ಸರ್ಕಾರಿ ವಿರೋಧಿ ಮತ್ತು ಸ್ವಾತಂತ್ರ್ಯ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾನಿಯ ಶವ ಗ್ರಾಮಕ್ಕೆ ಬರುತ್ತಿದ್ದಂತೆ ಶಿವ ಪ್ರದೇಶದಲ್ಲಿ ಪೊಲೀಸ್ ವಾಹನಕ್ಕೆ ಜನ ಬೆಂಕಿ ಹಚ್ಚಿದ್ದಾರೆ. ಆದರೆ ಈ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.
ಉಗ್ರ ಕಮಾಂಡರ್ ಕಳೇಬರವನ್ನು ಶವಸಂಸ್ಕಾರಕ್ಕೆ ವಶಪಡಿಸಿಕೊಳ್ಳುವ ಸಮಯದಲ್ಲಿ ಹತ್ತಾರು ಜನ ದ್ವಿಚಕ್ರ ವಾಹನಗಳಲ್ಲಿ ಬಂದು ರ್ಯಾಲಿ ನಡೆಸಿದ್ದಾರೆ. ಮಾರುಕಟ್ಟೆ ಮುಚ್ಚಿದ್ದು, ರಸ್ತೆಗಳಿಂದ ಸಾರ್ವಜನಿಕ ವಾಹನಗಳು ಇಳಿಮುಖವಾಗಿವೆ. ಪ್ರತಿಭಟನಾಕಾರರು ಪೊಲೀಸರ ಮೇಲು ಕಲ್ಲುತೂರಾಟ ನಡೆಸಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


