ಇಶ್ರತ್ ಜಹಾನ್ ಪ್ರಕರಣ: 2ನೇ ಅಫಿಡವಿಟ್ ಸಮರ್ಥಿಸಿಕೊಂಡ ಮೊಯ್ಲಿ
ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಶ್ರತ್ ಲಷ್ಕರ್ ಎ ತೊಯ್ಬಾ ಉಗ್ರಳಲ್ಲ ಎಂದು ಯುಪಿಎ ಸರ್ಕಾರ ಸುಪ್ರೀಂ ಕೋರ್ಟ್ ಗೆ...

Published On :
ನವದೆಹಲಿ: ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಶ್ರತ್ ಲಷ್ಕರ್ ಎ ತೊಯ್ಬಾ ಉಗ್ರಳಲ್ಲ ಎಂದು ಯುಪಿಎ ಸರ್ಕಾರ ಸುಪ್ರೀಂ ಕೋರ್ಟ್ ಗೆ 2ನೇ ಬಾರಿ ಸಲ್ಲಿಸಿದ್ದ ಅಫಿಡವಿಟ್ ಅನ್ನು ಮಾಜಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.
ತಾವು ಕಾನೂನು ಸಚಿವರಾಗಿದ್ದ ಅವಧಿಯಲ್ಲಿ ಸಲ್ಲಿಕೆಯಾಗಿದ್ದ ಈ ಅಫಿಡವಿಟ್ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಮೊಯ್ಲಿ, ಇಶ್ರತ್ ಜಹಾನ್ ಹಾಗೂ ಆಕೆಯ ಸಂಗಡಿಗರಿಗೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಜತೆ ನಂಟಿತ್ತು ಎಂಬ ಅಂಶವನ್ನು ಅಂದಿನ ಗೃಹ ಸಚಿವ ಪಿ. ಚಿದಂಬರಂ ಕೈಬಿಟ್ಟಿದ್ದರು ಎಂಬ ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ. ಪಿಳ್ಳೈ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಲದೆ ಅವರು ಈ ವಿಚಾರದಿಂದ ದೂರ ಸರಿಯುತ್ತಿದ್ದಾರೆ ಎಂದು ದೂರಿದ್ದಾರೆ.
2004ರ ಜೂನ್ 15ರಂದು ಇಶ್ರತ್ ಜಹಾನ್, ಜಾವೇದ್ ಶೇಖ್ ಅಲಿಯಾಸ್ ಪ್ರಾಣೇಶ್ ಪಿಳ್ಳೈ ಹಾಗೂ ಇಬ್ಬರು ಪಾಕಿಸ್ತಾನಿಗಳಾದ ಅಮ್ಜದ್ ಅಲಿ ಹಾಗೂ ಜಿಶಾನ್ ಜೋಹಾರ್ ಅಬ್ದುಲ್ ಘನಿ ಅವರು ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರ ಎರಡು ಅಫಿಡವಿಟ್ ಗಳನ್ನು ಸಲ್ಲಿಸಿತ್ತು. ಮೊದಲ ಅಫಿಡವಿಟ್ ನಲ್ಲಿ ಇಶ್ರತ್ ಜಹಾನ್ ಸೇರಿದಂತೆ ನಾಲ್ವರನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇನ್ನು ಎರಡನೇ ಅಫಿಡವಿಟ್ ನಲ್ಲಿ ಅವರು ಉಗ್ರರು ಎನ್ನುವುದಕ್ಕೆ ಯಾವುದೇ ಪ್ರಬಲ ಸಾಕ್ಷ್ಯಗಳಿಲ್ಲ ಎಂದು ಹೇಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


