ಪ್ರಧಾನ ಸುದ್ದಿ

ತೆಲಂಗಾಣದಲ್ಲಿ ಭೀಕರ ಅಪಘಾತ, ರಾಜ್ಯದ ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ...

ತೆಲಂಗಾಣದಲ್ಲಿ ಭೀಕರ ಅಪಘಾತ, ರಾಜ್ಯದ ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ
ಸಾಂದರ್ಭಿಕ ಚಿತ್ರ
Published On :
ಕೊಡಂಗಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತೆಲಂಗಾಣದ ಮೆಹಬೂಬನಗರ ಜಿಲ್ಲೆಯ ಕೊಡಂಗಲ್ ಬಳಿ ಸೋಮವಾರ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಯಲ್ಲಪ್ಪ(40) ಹಾಗೂ ಆತನ ಪತ್ನಿ ನರಸಮ್ಮ(32) ಮತ್ತು ನಾಲ್ಕು ವರ್ಷದ ಹೆಣ್ಣು ಮಗು, ಸತಿಶ್(42) ಹಾಗೂ ಸತೀಶ್ ಅವರ 8 ವರ್ಷದ ಮಗಳು ಅಶ್ವಿನಿ ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ತೇಗಲತಿಪ್ಪಿ ಹಾಗೂ ಸಲಗರ್ ಗ್ರಾಮದವರು ಎನ್ನಲಾಗಿದೆ.

ಚಿಂಚೋಳಿ ತಾಲೂಕಿನ ಸುಲೇಪೇಟ್ ನಿಂದ ಸೇಡಂ ತಾಲೂಕಿನ ಯಾನೇಗುಂದಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.