ಆಂಧ್ರಪ್ರದೇಶ: ಕಲಾಪಕ್ಕೆ ಅಡ್ಡಿ, ವೈಎಸ್ಆರ್ ಕಾಂಗ್ರೆಸ್ ನ 37 ಶಾಸಕರ ಅಮಾನತು
ಆಂಧ್ರಪ್ರದೇಶ ವಿಧಾಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಪಕ್ಷ ವೈಎಸ್ಆರ್ ಕಾಂಗ್ರೆಸ್ ನ 37...

Published On :
ಹೈದರಾಬಾದ್: ಆಂಧ್ರಪ್ರದೇಶ ವಿಧಾಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಪಕ್ಷ ವೈಎಸ್ಆರ್ ಕಾಂಗ್ರೆಸ್ ನ 37 ಶಾಸಕರನ್ನು ಸ್ಪೀಕರ್ ಕೊಡೆಲ ಶಿವಪ್ರಸಾದ್ ರಾವ್ ಅವರು ಅಮಾನತುಗೊಳಿಸಿದ್ದಾರೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ವೈಎಸ್ ಜಗನಮೋಹನ್ ರೆಡ್ಡಿ ಹಾಗೂ ಇತರೆ ವೈಎಸ್ ಆರ್ ಕಾಂಗ್ರೆಸ್ ಶಾಸಕರು ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿ ಭೂ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸದನದಲ್ಲಿ ಧರಣಿ ನಡೆಸಿದರು.
ಟಿಡಿಪಿ ಸರ್ಕಾರದ ಸಚಿವರಾದ ಪಿ ಪುಲ್ಲ ರಾವ್ ಹಾಗೂ ಪಿ ನಾರಾಯಣ ಅವರು ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಗನ್ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಟಿಡಿಪಿ ಶಾಸಕರು ಹಾಗೂ ಬಿಜೆಪಿ ಸದಸ್ಯರು ಜಗನ್ ಅವರು ಸಚಿವರ ವಿರುದ್ಧದ ಆರೋಪವನ್ನು ಸದನದಲ್ಲಿ ಸಾಬೀತು ಮಾಡಲಿ, ಇಲ್ಲದಿದ್ದರೆ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದರು.
'ಒಂದು ವೇಳೆ ನೀವು ಆರೋಪ ಸಾಬೀತು ಮಾಡಿದರೆ, ಆ ಇಬ್ಬರು ಸಚಿವರನ್ನು ನಾನು ಈಗಲೇ ವಜಾಗೊಳಿಸುತ್ತೇನೆ. ಇಲ್ಲದಿದ್ದರೆ ಸದನದ ಶಿಸ್ತು ಕ್ರಮವನ್ನು ನೀವು ಎದುರಿಸಬೇಕಾಗುತ್ತದೆ' ಎಂದು ಚಂದ್ರಬಾಬು ನಾಯ್ಡು ಘೋಷಿಸಿದರು. ಇದಕ್ಕೆ ಒಪ್ಪದ ಪ್ರತಿಪಕ್ಷದ ನಾಯಕ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಕಲಾಪಕ್ಕೆ ಅಡ್ಡಿಪಡಿಸಿದರು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಜಗನ್ ಸೇರಿದಂತೆ ವೈಎಸ್ಆರ್ ಕಾಂಗ್ರೆಸ್ ನ 37 ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


