ಪ್ರಧಾನ ಸುದ್ದಿ

ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣ

ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ...

ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣ
ವೇದಿಕೆಯಲ್ಲಿ ಪ್ರಧಾನಿ ಮೋದಿ ಹಾಗೂ ರವಿಶಂಕರ್ ಗುರೂಜಿ
Published On :
ನವದೆಹಲಿ: ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಆಯೋಜಿಸಿರುವ 'ವಿಶ್ವ ಸಂಸ್ಕೃತಿ ಉತ್ಸವ'ಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ  ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಿದರು.
ಸುಮಾರು 155 ದೇಶಗಳ ಭಕ್ತರು ವಿಶ್ವ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುತ್ತಿದ್ದು, ವಿಶ್ವದ ಸುಮಾರು 36 ಸಾವಿರ ಕಲಾವಿದರು ಈ  ಮೇಳದಲ್ಲಿ ಪ್ರದರ್ಶನ ನೀಡಲಿದ್ದಾರೆ.
ವಿಶ್ವ ಸಂಸ್ಕೃತಿ ಉತ್ಸವದಿಂದ ಪರಿಸರ ಹಾನಿಯಾಗುತ್ತದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ 5 ಕೋಟಿ ರುಪಾಯಿ ದಂಡ ಸೇರಿದಂತೆ ಕೆಲವು ಷರತ್ತಿನೊಂದಿಗೆ ವಿಶ್ವ ಸಂಸ್ಕೃತಿ ಉತ್ಸವ ನಡೆಸಲು ಅನುಮತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.