ದುರ್ಬಲ ಬಾಲಕಾರ್ಮಿಕ ಕಾನೂನು ಮೇಕ್ ಇನ್ ಇಂಡಿಯಾಗೆ ಅಡ್ಡಿ: ಮೋದಿಗೆ ಕೈಲಾಶ್ ಸತ್ಯಾರ್ಥಿ ಎಚ್ಚರಿಕೆ
ಬಾಲಕಾರ್ಮಿಕ ಕಾನೂನು ಮತ್ತಷ್ಟು ಬಲಿಷ್ಠಗೊಳ್ಳದೇ ಇದ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಯೋಜನೆ ದುರಂತವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋಲ್ಕತಾ: ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕೈಲಾಶ್ ಸತ್ಯಾರ್ಥಿ, ಮೇಕ್ ಇನ್ ಇಂಡಿಯಾ ಹಾಗೂ ಬಾಲಕಾರ್ಮಿಕರ ಬಗ್ಗೆ ಮಾತನಾಡಿದ್ದು, ಬಾಲಕಾರ್ಮಿಕ ಕಾನೂನು ಮತ್ತಷ್ಟು ಬಲಿಷ್ಠಗೊಳ್ಳದೇ ಇದ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಯೋಜನೆ ದುರಂತವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕೈಲಾಶ್ ಸತ್ಯಾರ್ಥಿ, ವಿದೇಶದಿಂದ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಭಾರತಕ್ಕೆ ಬರುತ್ತವೆ, ಆದರೆ ಇಲ್ಲಿನ ಬಾಲಕಾರ್ಮಿಕ ಕಾನೂನುಗಳು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಇರದೇ ಇದ್ದರೆ ಮೇಕ್ ಇನ್ ಇಂಡಿಯಾದಿಂದ ವಿಪತ್ತು ಎದುರಾಗುವ ಸಂಭವವಿದೆ ಎಂದು ಎಚ್ಚರಿಸಿದ್ದಾರೆ.
ಮೇಕ್ ಇನ್ ಇಂಡಿಯಾ ಅದ್ಭುತವಾದ ಯೋಜನೆಯಾಗಿದೆ, ಆದರೆ ಈ ಯೋಜನೆ ದೇಶದ ದೌರ್ಬಲ್ಯವನ್ನು ಬಹಿರಂಗಗೊಳಿಸುತ್ತದೆ ಎಂದು ಸತ್ಯಾರ್ಥಿ ಎಚ್ಚರಿಸಿದ್ದಾರೆ. ಉತ್ಪಾದನಾ ವಲಯದಲ್ಲಿ ಬಾಲಕಾರ್ಮಿಕರು ಕೆಲಸ ಮಾಡುವಂತಾದರೆ ಮೇಕ್ ಇನ್ ಇಂಡಿಯಾ ಯಶಸ್ವಿಯಾಗುವುದಿಲ್ಲ ಎಂದು ಸತ್ಯಾರ್ಥಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


