ಪ್ರಧಾನ ಸುದ್ದಿ

ಸ್ಮಾರಕಗಳ ನಿರ್ಮಾಣಕ್ಕೆ ಶೀಘ್ರವೇ ಆನ್ ಲೈನ್ ಅನುಮೋದನೆ ವ್ಯವಸ್ಥೆ ಜಾರಿ: ಕೇಂದ್ರ ಸರ್ಕಾರ

ಸ್ಮಾರಕಗಳನ್ನು ನಿರ್ಮಿಸುವುದು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಏಕ ಗವಾಕ್ಷಿ ವ್ಯವಸ್ಥೆಯಲ್ಲಿ ಅನುಮೋದನೆ ನಿಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ

ಸ್ಮಾರಕಗಳ ನಿರ್ಮಾಣಕ್ಕೆ ಶೀಘ್ರವೇ ಆನ್ ಲೈನ್ ಅನುಮೋದನೆ ವ್ಯವಸ್ಥೆ ಜಾರಿ: ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ
Published On :

ನವದೆಹಲಿ: ಸ್ಮಾರಕಗಳನ್ನು ನಿರ್ಮಿಸುವುದು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಏಕ ಗವಾಕ್ಷಿ ವ್ಯವಸ್ಥೆಯಲ್ಲಿ ಅನುಮೋದನೆ ನಿಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ನಗರಾಭಿವೃದ್ಧಿ  ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು, ಸ್ಮಾರಕ ನಿರ್ಮಾಣ ಮಾಡಬೇಕಿದ್ದರೆ ಅಥವಾ ನಗರಾಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಪಡೆಯಬೇಕಿದ್ದರೆ ದೆಹಲಿಗೆ ಆಗಮಿಸಬೇಕಿತ್ತು ಆದರೆ ಇನ್ನು ಮುಂದೆ ಆನ್ ಲೈನ್ ಮೂಲಕ ಅನುಮೋದನೆ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಗಣ್ಯ ವ್ಯಕ್ತಿಗಳ ಸ್ಮಾರಕ ನಿರ್ಮಾಣ ಮಾಡಬೇಕಿದ್ದರೆ ಸಾರ್ವಜನಿಕರು ಆನ್ ಲೈನ್ ಮೂಲಕ ಅನುಮೋದನೆ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಆಡಳಿತದಲ್ಲಿ ಏಕಗವಾಕ್ಷಿ ಅನುಮೋದನೆ ವ್ಯವಸ್ಥೆ ಜಾರಿಗೆ ತರುವುದರ ಪರವಾಗಿದೆ. ಇದರಿಂದಾಗಿ ದೇಶದಲ್ಲಿ ಉದ್ಯಮ ಪ್ರಾರಂಭಿಸುವುದು ಸುಲಭವಾಗಲಿದೆ ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.