ಪ್ರಧಾನ ಸುದ್ದಿ

OMG! ಯುಪಿಎ ಸರ್ಕಾರದ 2 ವರ್ಷದ ಆಡಳಿತ ವಿಫಲ: ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಟೀಕಿಸುವ ಬರದಲ್ಲಿ,...

OMG! ಯುಪಿಎ ಸರ್ಕಾರದ 2 ವರ್ಷದ ಆಡಳಿತ ವಿಫಲ: ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಟೀಕಿಸುವ ಬರದಲ್ಲಿ, ಯುಪಿಎ ಸರ್ಕಾರವನ್ನು ಟೀಕಿಸಿ ಮುಜಗರ ಅನುಭವಿಸಿದ ಘಟನೆ ಬುಧವಾರ ನಡೆಯಿತು,
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಯುಪಿಎ ಸರ್ಕಾರದ ಎರಡು ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದರು.
ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದೆ. ಆದರೆ ಇದುವರೆಗೂ ಯಾವುದೇ ಬದಲಾವಣೆ ತಂದಿಲ್ಲ ಮತ್ತು ಅಭಿವೃದ್ಧಿ ಕೆಲಸಗಳನ್ನು ಮಾಡುವ ಯಾವುದೇ ಯತ್ನವನ್ನು ಯುಪಿಎ ಸರ್ಕಾರ ಮಾಡುತ್ತಿಲ್ಲ ಎಂದು ಸೋನಿಯಾ ಆರೋಪಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸೋನಿಯಾ, ನೀವು ಪ್ರಧಾನಿಯನ್ನು ಭೇಟಿ ಮಾಡಲು ಸಮಯ ಕೇಳಿದ್ದೀರಿ ಎಂದು ನಾನು ನಂಬಿದ್ದೇನೆ. ಆದರೆ ನಿಮ್ಮನ್ನು ಭೇಟಿ ಮಾಡಲು ಅವರಿಗೆ ಭಯ ಇದೆ ಎಂದರು.
ವಿಶೇಷ ಎಂದರೆ, ಸೋನಿಯಾ ಗಾಂಧಿ ಅವರು ಲಿಖಿತ ಭಾಷಣ ಓದುವ ವೇಳೆಯೇ ಎನ್ ಡಿಎ ಬದಲು ಯುಪಿಎ ಬಳಸಿದ್ದಾರೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತನ್ನಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.