ಕೈಗಾರಿಕಾ ಕ್ಷೇತ್ರದಲ್ಲಿ ಶೇ.4 .5 ರಷ್ಟು ಬೆಳವಣಿಗೆ ನಿರೀಕ್ಷೆ: ಸಿದ್ದರಾಮಯ್ಯ
ಮಾ.18 ರಂದು 2016 -17 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕೈಗಾರಿಕಾ ಕ್ಷೇತ್ರದಲ್ಲಿ ಶೇ.4 .5 ರಷ್ಟು ಬೆಳವಣಿಗೆ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು: ಮಾ.18 ರಂದು 2016 -17 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕೈಗಾರಿಕಾ ಕ್ಷೇತ್ರದಲ್ಲಿ ಶೇ.4 .5 ರಷ್ಟು ಬೆಳವಣಿಗೆ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಕೈಗಾರಿಕಾ ಸ್ನೇಹಿ ನೀತಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇನ್ವೆಸ್ಟ್ ಕರ್ನಾಟಕ-2016 ರಲ್ಲಿ 1 .77 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿದೆ. 2 ವರ್ಷಗಳಲ್ಲಿ 96,435 ಕೋಟಿ ರೂ ಬಂಡವಾಳ ಹೂಡಲಾಗಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷ ಕೈಗಾರಿಕಾ ಕ್ಷೇತ್ರದಲ್ಲಿ ಶೇ 4 .5 ರಷ್ಟು ಬೆಳವಣಿಗೆ ನಿರೀಕ್ಷೆ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸ್ಟಾರ್ಟ್ ಅಪ್ ಜಾರಿಗೆ ತಂದ ಕೀರ್ತಿ ಕರ್ನಾಟಕ ಸರ್ಕಾರದ್ದಾಗಿದ್ದು, 363 ಯೋಜನೆಗಳಲ್ಲಿ 2 .27 ಲಕ್ಷ ಉದ್ಯೋಗ ಹಾಗೂ 1,080 ಯೋಜನೆಗಳಲ್ಲಿ 4.84 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಿಎಂ ತಿಳಿಸಿದ್ದಾರೆ.
ಬಜೆಟ್ ನಲ್ಲಿ ಕೈಗಾರಿಕಾ ಮೂಲಸೌಕರ್ಯಕ್ಕಾಗಿ 175 ಕೋಟಿ ರೂ ಅನುದಾನ ಘೋಷಿಸಿರುವ ಸಿದ್ದರಾಮಯ್ಯ ಬಂಡವಾಳ ಹೂಡಿಕೆ ಉತ್ಪಾದನಾ ವಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


