ಸಿಎಂ ಬಜೆಟ್ ಮಂಡನೆ ವೇಳೆ ಪವರ್ ಕಟ್: ನಾಲ್ವರು ಅಧಿಕಾರಿಗಳ ಅಮಾನತು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸೌಧದಲ್ಲಿ ಬಜೆಟ್ ಬಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ...

Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸೌಧದಲ್ಲಿ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲೇ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.
ಕರ್ತವ್ಯಲೋಪ ಆರೋಪದ ಮೇಲೆ ವಿಧಾಸೌಧ ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸಿ.ರಾಮಲಿಂಗಯ್ಯ ಸೇರಿದಂತೆ ನಾಲ್ವರು ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.
ಬಜೆಟ್ ಮಂಡನೆ ವೇಳೆ ಎರಡು ಬಾರಿ ವಿದ್ಯುತ್ ಕೈಕೊಟ್ಟಿದ್ದರಿಂದ ಸಿದ್ದರಾಮಯ್ಯ ಅವರು ಅಧಿಕಾರಿಯೊಬ್ಬರ ಮೊಬೈಲ್ ಫ್ಲ್ಯಾಶ್ ಲೈಟ್ ನಲ್ಲಿ ಭಾಷಣ ಓದಲು ಯತ್ನಿಸಿದ್ದರು. ಬಳಿಕ ವಿದ್ಯುತ್ ಬಂದಾಗ ಭಾಷಣ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕತ್ತಲ ಭಾಗ್ಯ ಎಂದು ವ್ಯಂಗ್ಯವಾಡಿದ್ದರು.
ಘಟನೆಯಿಂದ ತೀವ್ರ ಮುಜುಗರ ಅನುಭವಿಸಿದ್ದ ಸಿಎಂ ಬಜೆಟ್ ಮಂಡನೆ ಬಳಿಕ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದರು. ಈ ವೇಳೆ ನಮ್ಮ ಇಲಾಖೆಯಿಂದ ಯಾವುದೇ ತಪ್ಪಾಗಿಲ್ಲ. ಆದರೆ ವಿಧಾನಸೌಧದಲ್ಲೇ ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಕಡಿತಗೊಂಡಿರಬಹುದು ಎಂದಿದ್ದರು. ಇದಾದ ನಂತರ ಸಚಿವರು ಅಧಿಕಾರಿಗಳು ಅಮಾನತಿಗೆ ಸೂಚಿಸಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


