ಸಲಿಂಗಕಾಮ ಅಪರಾಧವಲ್ಲ: ಆರೆಸ್ಸೆಸ್
ಲೈಂಗಿಕತೆ ವ್ಯಕ್ತಿಗಳ ವೈಯಕ್ತಿಕ ವಿಚಾರವಾಗಿದ್ದು, ಸಲಿಂಗಕಾಮ ಅಪರಾಧವಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರೆಸ್ಸೆಸ್ಸ್ ) ಹೇಳಿದೆ...

Published On :
ನವದೆಹಲಿ: ಲೈಂಗಿಕತೆ ವ್ಯಕ್ತಿಗಳ ವೈಯಕ್ತಿಕ ವಿಚಾರವಾಗಿದ್ದು, ಸಲಿಂಗಕಾಮ ಅಪರಾಧವಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರೆಸ್ಸೆಸ್ಸ್ ) ಹೇಳಿದೆ.
ರಾಷ್ಟ್ರದ ರಾಜಧಾನಿಯಲ್ಲಿ ಗುರುವಾರ ನಡೆದ ಇಂಡಿಯಾ ಟುಡೇ ಕಾನ್‌ಕ್ಲೇವ್ 2016 ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಆರೆಸ್ಸ್‌ಸ್ ಜತೆ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಈ ರೀತಿಯ ಸುಧಾರಣಾ ನಿಲುವನ್ನು ವ್ಯಕ್ತಪಡಿಸಿದ್ದಾರೆ.
ಬೇರೆಯವರ ಜೀವನದ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದ ಸಲಿಂಗ ಲೈಂಗಿಕತೆಯ ಆಯ್ಕೆ ವೈಯಕ್ತಿಕ ವಿಚಾರವಾಗಿದ್ದು, ಅದು ಅಪರಾಧವಲ್ಲ ಎಂದು ದತ್ತಾತ್ರೇಯ ಅವರು ಟ್ವೀಟ್ ಮಾಡಿದ್ದಾರೆ.
ಅದೇ ವೇಳೆ ಸಲಿಂಗ ಕಾಮಕ್ಕೆ ಸಂಬಂಧಿಸಿದಂತೆ ಇರುವ ವಸಾಹತು ಕಾಲದ ಕಾನೂನಿನ ಕುರಿತು ಸರ್ಕಾರ ಮರು ಚಿಂತನೆ ನಡೆಸುವ ಮತ್ತು ಅದನ್ನು ತೆಗೆದು ಹಾಕುವ ನಿರೀಕ್ಷೆಯನ್ನು ಆರೆಸ್ಸೆಸ್ಸ್ ವ್ಯಕ್ತ ಪಡಿಸಿದೆ.
ಸುಪ್ರೀಂ ಕೋರ್ಟ್ ಸಲಿಂಗ ಕಾಮ ವಿಚಾರದಲ್ಲಿ ಸಂಪ್ರದಾಯವಾದಿ ನಿಲುವು ತಾಳಿದೆ. ಆದರೆ ಲಕ್ಷಾಂತರ ಜನ ಸಲಿಂಗ ಕಾಮ ಬಯಸುವಾಗ ಅದನ್ನು ಹತ್ತಿಕ್ಕಲಾಗದು. ಹೀಗಾಗಿ ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸಬಹುದು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದರು.
ಭಾರತೀಯ ದಂಡ ಸಂಹಿತೆ 377 ಸೆಕ್ಷನ್ ಪ್ರಕಾರ ಭಾರತದಲ್ಲಿ ಸಲಿಂಗಕಾಮ ಅಪರಾಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rashtriya Swayamsevak Sanghಅಪರಾಧರಾಷ್ಟ್ರೀಯ ಸ್ವಯಂ ಸೇವಕ್ ಸಂಘDattatreya Hosabaleದತ್ತಾತ್ರೇಯ ಹೊಸಬಾಳೆಸಲಿಂಗ ಕಾಮHomosexuality
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


