ಸರ್ಕಾರ ಎಸಿಬಿ ರಚನೆ ಅಧಿಸೂಚನೆ ಹಿಂಪಡೆಯಲ್ಲ: ಸಿಎಂ ಸಿದ್ದರಾಮಯ್ಯ
ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು...

ಬೆಂಗಳೂರು: ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸರ್ಕಾರ ಅಧಿಸೂಚನೆ ಹಿಂಪಡೆಯಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಎಸಿಬಿ ರಚನೆ ಕುರಿತು ಪ್ರತಿಕ್ರಿಯಿಸಿದ ಸಿಎಂ, ಎಸಿಬಿಯಿಂದ ಲೋಕಾಯುಕ್ತ ಸಂಸ್ಥೆ ದುರ್ಬಲಗೊಳ್ಳುತ್ತದೆ ಎನ್ನುವುದು ತಪ್ಪು ಕಲ್ಪನೆ. ಲೋಕಾಯುಕ್ತವನ್ನು ಬಲಹೀನಗಿಳಿಸುವ ಯಾವುದೇ ಪ್ರಯತ್ನ ನಡೆಯುತ್ತಿಲ್ಲ ಎಂದು ಸಿಎಂ ಹೇಳಿದ್ದಾರೆ. ಅಲ್ಲದೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಾಯುಕ್ತ ಅಧಿನಿಯಮ 1984ರ ಅಡಿ ಲೋಕಾಯುಕ್ತ ಸಂಸ್ಥೆ ಕಾರ್ಯ ನಿರ್ವಹಿಸುತ್ತದೆ ಮತ್ತು ಅದರ ಕಾರ್ಯನಿರ್ವಹಣೆಗೆ ನಿಯೋಜಿಸಲಾಗಿರುವ ಪೊಲೀಸ್ ವಿಭಾಗ ಯಾವುದೇ ತೊಂದರೆಯಿಲ್ಲದೆ ಅಬಾಧಿತವಾಗಿ ಕಾರ್ಯನಿರ್ವಹಿಸುತ್ತದೆ. ಎಸಿಬಿ ರಚಿಸಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸದರೆ ಅದರಿಂದ ಲೋಕಾಯುತ್ತ ಸಂಸ್ಥೆಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ, ಲೋಕಾಯುಕ್ತವನ್ನು ಬಲಹೀನಗೊಳಸಿದಂತೆಯೂ ಆಗುವುದಿಲ್ಲ ಎಂದರು.
ಲೋಕಾಯುಕ್ತರ ಅಧಿಕಾರವನ್ನು ಸಹ ಯಾವುದೇ ರೀತಿಯಿಂದ ಮೊಟಕುಗೊಳಿಸುವುದಿಲ್ಲ. ಬದಲಿಗೆ ಲೋಕಾಯುಕ್ತದ ಕೆಲಸವು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ಸಾಗುತ್ತದೆ. ಭ್ರಷ್ಟಾಚಾರ ಅಧಿನಿಯಮದಡಿ ಲೋಕಾಯುಕ್ತರಿಗೆ ಯಾವುದೇ ಅಧಿಕಾರವಿಲ್ಲದಿದ್ದರೂ ಅವರೇ ತನಿಖೆಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂಬ ಸಾರ್ವಜನಿಕ ಗ್ರಹಿಕೆ (ಟ್ಠಚ್ಝಿಜ್ಚಿ ಟಛ್ಟಿ್ಚಟಠಿಜಿಟ್ಞ) ಕಾರಣದಿಂದಾಗಿ ಜನರಲ್ಲಿ ಗೊಂದಲ ಉಂಟಾಗಿದೆಯಷ್ಟೆ ಎನ್ನುವುದು ಸಿಎಂ ಸಿದ್ದರಾಮಯ್ಯನವರ ಸ್ಪಷ್ಟನೆಯಾಗಿದೆ.
ಒಂದೊಮ್ಮೆ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಲೋಕಾಯುಕ್ತ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾದ ಪಕ್ಷದಲ್ಲಿ ಅದನ್ನೂ ಸಹ ಲೋಕಾಯುಕ್ತ ಸ್ವತಂತ್ರವಾಗಿಯೇ ತನಿಖೆ ನಡೆಸುವ ಎಲ್ಲಾ ಅಧಿಕಾರವನ್ನು ಲೋಕಾಯುಕ್ತ ಹೊಂದಿದೆ ಎಂದೂ ಈ ಮೂಲಕ ತಿಳಿಯಪಡಿಸುತ್ತೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


