ಪ್ರಧಾನ ಸುದ್ದಿ

ಬಜೆಟ್ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ

ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟವನ್ನು...

ಬಜೆಟ್ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ
ಸಿದ್ದರಾಮಯ್ಯ
Published On :
ಬೆಂಗಳೂರು: ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಮಧ್ಯೆ ಅಧಿವೇಶನದ ವೇಳೆಯೇ ಸಭೆ ನಡೆಸಿರುವ 25ಕ್ಕೂ ಹೆಚ್ಚು ಸಚಿವ ಆಕಾಂಕ್ಷಿ ಕಾಂಗ್ರೆಸ್ ಶಾಸಕರ ನಿಯೋಗ ದೆಹಲಿಗೆ ತೆರಳಲು ನಿರ್ಧರಿಸಿದ್ದು, ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡುವಂತೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಸಂಪುಟದ 15 ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಅವರಿಗೆ ಪಕ್ಷದ ಜವಾಬ್ದಾರಿ ನೀಡುವಂತೆ ಒತ್ತಾಯಿಸಲಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡ ನಂತರ ದೆಹಲಿಗೆ ತೆರಳಲು ಕಾಂಗ್ರೆಸ್ ಶಾಸಕರ ನಿಯೋಗ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವ ಸಂದರ್ಭದಲ್ಲಿ ಬಜೆಟ್ ನಂತರ ಸಂಪುಟ ಪುನಾರಚಿಸುವ ಪ್ರಸ್ತಾವನ್ನು ಸಿಎಂ ಮುಂದಿಟ್ಟದ್ದರು. ಇದಕ್ಕೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದ ಹೈಕಮಾಂಡ್, ಬಜೆಟ್ ಅಧಿವೇಶನದ ನಂತರ ದೆಹಲಿಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಗ ಸಂಪುಟ ಪನಾರಚನೆಗೆ ಮುಂದಾಗಿರುವ ಸಿದ್ದರಾಮಯ್ಯ ಅನುಭವಿಗಳು ಹಾಗೂ ಪರಿಣಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಮರ್ಥ ತಂಡ ಕಟ್ಟಿಕೊಳ್ಳಲು ಮುಂದಾಗಿದ್ದಾರೆ.
ಸಂಪುಟದಲ್ಲಿರುವ ಕೆಲವು ಅಸಮರ್ಥ ಸಚಿವರನ್ನು ಕೈಬಿಟ್ಟು ಸಮರ್ಥರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ 2018ರ ವಿಧಾನಸಭೆ ಚುನಾವಣೆಯನ್ನು ತಮ್ಮದೇ ನೇತೃತ್ವದಲ್ಲಿ ಎದುರಿಸಲು ಸಿದ್ದರಾಮಯ್ಯ ಸಜ್ಜಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.