ಪ್ರಧಾನ ಸುದ್ದಿ

ಡಿಎಂಕೆಯಿಂದ ವಿಜಯಕಾಂತ್ ಗೆ 500 ಕೋಟಿ ಹಣದ ಆಮೀಷ: ವೈಕೋ

ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯ್ ಕಾಂತ್ ಅವರಿಗೆ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳು ಹಣ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿವೆ ಎಂದು ಎಂಡಿಎಂಕೆ ಮುಖ್ಯಸ್ಥ

ಡಿಎಂಕೆಯಿಂದ ವಿಜಯಕಾಂತ್ ಗೆ 500 ಕೋಟಿ ಹಣದ ಆಮೀಷ: ವೈಕೋ
ವಿಜಯ್ ಕಾಂತ್
Published On :

ಮಧುರೈ:  ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯ್ ಕಾಂತ್ ಅವರಿಗೆ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳು ಹಣ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿವೆ ಎಂದು ಎಂಡಿಎಂಕೆ ಮುಖ್ಯಸ್ಥ ವೈಕೋ  ಆರೋಪಿಸಿದ್ದಾರೆ. ಆದರೆ, ವಿಜಯ್ ಕಾಂತ್ ಎಲ್ಲಾ ಆಫರ್‌ಗಳನ್ನು ತಳ್ಳಿಹಾಕಿ ಪೀಪಲ್ಸ್ ವೆಲ್‌ಫೇರ್ ಫ್ರಂಟ್‌ನೊಂದಿಗೆ ಕೈ ಜೋಡಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಎಂಕೆ ಪಕ್ಷ 80 ವಿಧಾನಸಭಾ ಸೀಟುಗಳು ಮತ್ತು 500 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಮಿಷವೊಡ್ಡಿದ್ದರೆ, ಬಿಜೆಪಿ ರಾಜ್ಯಸಭಾ ಸದಸ್ಯತ್ವ ಮತ್ತು ಕೇಂದ್ರ ಸಚಿವ ಸ್ಥಾನ ನೀಡುವ ಆಮಿಷವೊಡ್ಡಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯ್ ಕಾಂತ್ ಎಲ್ಲಾ ಆಫರ್‌ಗಳನ್ನು ತಿರಸ್ಕರಿಸಿ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಸರಕಾರ ರಚನೆಗಾಗಿ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ. ಡಿಎಂಕೆ ಪಕ್ಷದ ಭ್ರಷ್ಟಚಾರದಿಂದ ಬಂದ ಹಣವನ್ನು ತೆಗೆದುಕೊಳ್ಳಲು ಅವರು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ. ವೈಕೋ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಡಿಎಂಕೆ ಖಜಾಂಚಿ ಎಂ.ಕೆ.ಸ್ಟಾಲಿನ್, ಪಕ್ಷ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
 
ಡಿಎಂಕೆ ಮತ್ತು ಡಿಎಂಡಿಕೆ ಪಕ್ಷಗಳ ನಡುವೆ ಮೈತ್ರಿ ಕುರಿತಂತೆ ಮಾತುಕತೆಯೇ ನಡೆದಿಲ್ಲವೆಂದಾದ ಮೇಲೆ ಹಣ, ಸೀಟು ಹಂಚಿಕೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.