ಪ್ರಧಾನ ಸುದ್ದಿ

ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ: ಸುಪ್ರೀಂ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿರುವ ಕೇಂದ್ರ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್...

ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ: ಸುಪ್ರೀಂ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ
ಸುಪ್ರೀಂ ಕೋರ್ಟ್
Published On :

ನವದೆಹಲಿ: ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿರುವ ಕೇಂದ್ರ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಉತ್ತರಾಖಂಡದಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಿರುವುದು ಅಸಂವಿಧಾನಿಕ ಎಂದು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲಾಗುತ್ತದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಸರ್ಕಾರದ ಕುತಂತ್ರಕ್ಕೆ ಕಾನೂನು ಮೂಲಕ ತಡೆ ಹಾಕಲಾಗುತ್ತದೆ ಎಂದ ಕಾಂಗ್ರೆಸ್, ರಾಜ್ಯಪಾಲರು ವಿಧಾನ ಸಭೆಯಲ್ಲಿ ಬಹುಮತ ಸಾಬೀತು ಮಾಡುವಂತೆ ಸೂಚನೆ ನೀಡಿದ್ದರೂ ಅದಕ್ಕೆ ಅವಕಾಶ ನೀಡದೆ ಸರ್ಕಾರವನ್ನು ವಜಾ ಮಾಡಿದ್ದಾರೆ ಎಂದು ಆರೋಪಿಸಿದೆ.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ವಿರುದ್ಧ 9 ಮಂದಿ ಕಾಂಗ್ರೆಸ್ ಶಾಸಕರು ಭಂಡಾಯದ ಬಾವುಟ ಹಾರಿಸಿದ್ದರು. ಈ ಸಂಬಂಧ ನಿನ್ನೆ ಸಂಪುಟ ಸಭೆಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಧಿಕೃತ ಒಪ್ಪಿಗೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.