ಎಸಿಬಿ ರಚನೆ: ಸಿಎಂ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ ಎಸ್ ಎಂ ಕೃಷ್ಣ
ಪಕ್ಷದ ಹಿರಿಯ ಮುಖಂಡರ ಸಲಹೆಗಳನ್ನು ಬದಿಗೊತ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟಾಚಾರ ನಿಗ್ರಹ ದಳ...

Published On :
ನವದೆಹಲಿ: ಪಕ್ಷದ ಹಿರಿಯ ಮುಖಂಡರ ಸಲಹೆಗಳನ್ನು ಬದಿಗೊತ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚಿಸಿದ್ದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಎರಡು ದಿನಗಳಿಂದ ದೆಹಲಿಯಲ್ಲೇ ಇದ್ದ ಕೃಷ್ಣ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷದ ಹಿರಿಯರ ಸಲಹೆಗಳನ್ನು ಬದಿಗೊತ್ತಿ ಎಸಿಬಿಯನ್ನು ರಚನೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಹಾಗಾಗಿ, ತಾವು ಮಧ್ಯಪ್ರವೇಶಿಸಿ ಸರಿಪಡಿಸಬೇಕು. ಇಲ್ಲದಿದ್ದರೆ, ಭಾರಿ ಬೆಲೆ ತೆರಬೇಕಾಗಬಹುದು ಎಂದು ಕೃಷ್ಣ ತಿಳಿಸಿದ್ದಾರೆ.
ಲೋಕಾಯುಕ್ತ ಸಂಸ್ಥೆ ಮೊಟಕುಗೊಳಿಸಿ ಸಿದ್ದರಾಮಯ್ಯನವರು ನಡೆಸಿರುವ ಪ್ರಯತ್ನದ ವಿರುದ್ಧ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ. ಎಸಿಬಿ ರಚನೆ ವಿರೋಧಿಸಿ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ನಾಯಕತ್ವದ ವಿರುದ್ಧ ಪಕ್ಷದ ಶಾಸಕರಿಗೆ ಅಸಮಾಧಾನವಿದೆ. ಸಿದ್ದರಾಮಯ್ಯನವರಿಗೆ ಸ್ವಲ್ಪ ತಿಳಿ ಹೇಳಿ, ಭಿನ್ನಭಿಪ್ರಾಯಗಳನ್ನು ಬಗೆಹರಿಸಿ. ಇಲ್ಲವಾದರೆ ಬೆಲೆ ತೆರಬೇಕಾಗುತ್ತದೆ ಎಂದು ಹೈಕಮಾಂಡ್ ನಲ್ಲಿ ಕೃಷ್ಣ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Sonia Gandhiಸೋನಿಯಾ ಗಾಂಧಿSiddaramaiahಸಿದ್ದರಾಮಯ್ಯRahul Gandhiರಾಹುಲ್ ಗಾಂಧಿSM Krishnaಎಸ್ ಎಂ ಕೃಷ್ಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


