ಉತ್ತರಾಖಂಡ್ ಬಹುಮತ ಪರೀಕ್ಷೆ ನಿರ್ಧಾರಕ್ಕೆ ಸಮಯ ಕೋರಿದ ಕೇಂದ್ರ
ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲು ಗಂಭೀರವಾಗಿ ಪರಿಗಣಿಸುವುದಕ್ಕೆ ಒಂದು ದಿನದ ಸಮಯಾವಕಾಶವನ್ನು ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲು ಗಂಭೀರವಾಗಿ ಪರಿಗಣಿಸುವುದಕ್ಕೆ ಒಂದು ದಿನದ ಸಮಯಾವಕಾಶವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿಂದ ಕೋರಿದೆ. ನೆನ್ನೆ ಈ ಆಯ್ಕೆಯನ್ನು ಪರಿಗಣಿಸುವಂತೆ ಕೇಂದ್ರಕ್ಕೆ ಸುಪ್ರೀಮ್ ಕೋರ್ಟ್ ಸೂಚಿಸಿತ್ತು.
ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೊನೆಗೊಳಿಸಿ ಹೊರಹಾಕಲಾಗಿರುವ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತು ಪಡಿಸುವ ಸಾಧ್ಯತೆಯನ್ನು 'ಗಂಭೀರವಾಗಿ ಪರಿಗಣಿಸಲು' ಸರ್ಕಾರಕ್ಕೆ ಒಂದು ದಿನದ ಅವಕಾಶ ಬೇಕೆಂದು ಅಟಾರ್ನಿ ಜನರಲ್ ಮುಕುಲ್ ರೋಹತ್ಗಿ ಕೇಳಿದ ಮೇಲೆ ದೀಪಕ್ ಮಿಶ್ರಾ ಮತ್ತು ಶಿವ ಕೀರ್ತಿ ಸಿಂಗ್ ಒಳಗೊಂಡ ಅಪೆಕ್ಸ್ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಮೇ ೬ಕ್ಕೆ ಮುಂದೂಡಿದೆ.
ರಾಷ್ಟ್ರಪತಿ ಆಳ್ವಿಕೆಯನ್ನು ವಜಾ ಮಾಡಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


