ತನಿಖೆಗೆ ಸಹಕರಿಸದ ಕಿಂಗ್ ಪಿನ್, ನನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾನೆ ಗುರೂಜಿ
ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮಂಗಳವಾರ ಕಡೆಗೂ ಪೊಲೀಸರ ಬಲೆಗೆ ಬಿದ್ದಿರುವ...

Published On :
ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮಂಗಳವಾರ ಕಡೆಗೂ ಪೊಲೀಸರ ಬಲೆಗೆ ಬಿದ್ದಿರುವ ಕಿಂಗ್ ಪಿನ್ ಶಿವಕುಮಾರ್ ಅಲಿಯಾಸ್ ಶಿವಕುಮಾರಯ್ಯ,ಗುರೂಜಿ ಸಿಐಡಿ ಅಧಿಕಾರಿಗಳ ವಿಚಾರಣೆಗೆ ಸಹಕರಿಸುತ್ತಿಲ್ಲ.
ಕಳೆದ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಲೀಕ್ ಕಿಂಗ್ ಪಿನ್ ಶಿವಕುಮಾರಸ್ವಾಮಿಯನ್ನು ಸಿಐಡಿ ಪೊಲೀಸರು ನಿನ್ನೆ ಬನ್ನೇರುಘಟ್ಟ ರಸ್ತೆಯ ಗಾರೇಬಾವಿಪಾಳ್ಯದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಬೆಂಗಳೂರಿನ ವಿಶೇಷ ಕೋಕಾ ಕೋರ್ಟ್ ಮುಂದೆ ಹಾಜರುಪಡಿಸಿ, 10 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.
ಸಿಐಡಿ ವಶದಲ್ಲಿರುವ ಶಿವಕುಮಾರಸ್ವಾಯನ್ನು ನಿನ್ನೆ ರಾತ್ರಿಯಿಂದ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ವಿಚಾರಣೆ ವೇಳೆ ಯಾವುದೇ ಮಾಹಿತಿ ನೀಡದೆ ತನಗೇನೂ ಗೊತ್ತಿಲ್ಲ ಎಂದು ಪುನರುಚ್ಚರಿಸುತ್ತಿದ್ದಾನೆ. ಅಲ್ಲದೆ ತಾನು 2013ರಿಂದಲೇ ಪ್ರಶ್ನೆ ಪತ್ರಿಕೆ ಲೀಕ್ ದಂಧೆಯಿಂದ ಹಿಂದೆ ಸರಿದಿರುವುದಾಗಿ ಹೇಳುವ ಈ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾನೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Policeಪೊಲೀಸ್not CooperatingPU Paper Leak Caseಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ಶಿವಕುಮಾರಸ್ವಾಮಿShivakumaraiahಸಹಕರಿಸುತ್ತಿಲ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


