'420 ವಿಶ್ವನಾಥ್ ಗೆ ಧಿಕ್ಕಾರ' ಎಂದ ವ್ಯಕ್ತಿ ಮೇಲೆ ಬೆಂಬಲಿಗರಿಂದ ಹಲ್ಲೆ
ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

Published On :
ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಘಟನೆ ಗುರುವಾರ ಬೆಂಗಳೂರಿನಲ್ಲಿ ನಡೆದಿದೆ.
ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವನಾಥ್ ಅವರು ಬರೆದಿರುವ 'ದಿ ಟಾಕಿಂಗ್ ಶಾಪ್' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದ ಕುರುಬರ ಸಂಘದ ಮುಖಂಡ ಶಿವರಾಮ್ ಅವರು '420 ವಿಶ್ವನಾಥ್ ಗೆ ಧಿಕ್ಕಾರ' ಎಂದು ಘೋಷಣೆ ಕೂಗಿದರು. ಇದರಿಂದ ಆಕ್ರೋಶಗೊಂಡ ಮಾಜಿ ಸಂಸದರ ಬೆಂಬಲಿಗರು, ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಿ ತಳ್ಳಾಡಿದರು. ಅಲ್ಲದೆ ಅವಾಚ್ಯ ಶಬ್ಧಗಳಿಂದ ಅವರನ್ನು ನಿಂದಿಸಿದರು.
ವಿಶ್ವನಾಥ್ ಅವರು ಸಂಸದರಾಗಿದ್ದ ವೇಳೆ ಕುರುಬ ಸಮುದಾಯಕ್ಕೆ ಯಾವುದೇ ರೀತಿಯ ಕೊಡುಗೆಗಳನ್ನು ನೀಡಿಲ್ಲ. ಸಮುದಾಯದ ಏಳಿಗೆಗೆ ಬೇಕಾದ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಶಿವರಾಮ್ ಅವರು ವಿಶ್ವನಾಥ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


