ಭಾರತದಲ್ಲಿ ಕ್ಯಾನ್ಸರ್ ನಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವು: ಕೇಂದ್ರ ಸರ್ಕಾರ
ಭಾರತದಲ್ಲಿ ಮಾರಕ ಕಾಯಿಲೆ ಕ್ಯಾನ್ಸರ್ ನಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ...

Published On :
ನವದೆಹಲಿ: ಭಾರತದಲ್ಲಿ ಮಾರಕ ಕಾಯಿಲೆ ಕ್ಯಾನ್ಸರ್ ನಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ಕ್ಯಾನ್ಸರ್ ರೋಗಿಗಳ ವಯಸ್ಸಿನ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಕಾಯಿಲೆಯಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ. ಸಾಮಾನ್ಯವಾಗಿ ಪುರುಷರು ಹೊಟ್ಟೆ ಹಾಗೂ ಗಂಟಲು ಕ್ಯಾನ್ಸರ್ ಗೆ ತುತ್ತಾದರೆ, ಮಹಿಳೆಯರು ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್ ಗೆ ಬಲಿಯಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸದನಕ್ಕೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಡ್ಡಾ, ಸರ್ಕಾರ ದೇಶದಲ್ಲಿ 20 ಕ್ಯಾನ್ಸರ್ ಸಂಸ್ಥೆಗಳನ್ನು ಹಾಗೂ 50 ತೃತೀಯ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಈ ಯೋಜನೆಯಡಿ 26 ರಾಜ್ಯಗಳಿಂದ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 47 ಪ್ರಸ್ತಾವನೆ ಬಂದಿದ್ದು, ಕ್ಯಾನ್ಸರ್ ಸಂಸ್ಥೆ ಸ್ಥಾಪನೆಗೆ 14 ಹಾಗೂ ತೃತೀಯ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆಗೆ ಏಳು ಪ್ರಸ್ತಾವನೆ ಬಂದಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


