ಇಷ್ಟಕ್ಕೂ ಸೋನಿಯಾ ಪೌರತ್ವ ಕಸಿದುಕೊಳ್ತೀರೋರು ಯಾರು? ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭಾರತೀಯ ಪೌರತ್ವವನ್ನು ಯಾರು ಕಸಿದು ಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ....

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭಾರತೀಯ ಪೌರತ್ವವನ್ನು ಯಾರು ಕಸಿದು ಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ನಾನು ಭಾರತದ ಪ್ರಜೆ, ನಾನು ಇಲ್ಲೇ ಸಾಯುವುದಾಗಿ ಸೋನಿಯಾ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಇಂಥಹ ಹೇಳಿಕೆಗಳು ಸೋನಿಯಾ ಅವರ ಘನತೆಗೆ ಗೌರವ ತರುವುದಿಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಮೂಲತಃ ಸ್ವಭಾವದಲ್ಲಿ ಹೇಡಿಯಾಗಿದ್ದಾರೆ. ಈ ವೇಳೆಯಲ್ಲಿ ಈ ರೀತಿಯ ಹೇಳಿಕೆಗಳನ್ನು ಯಾಕೆ ನೀಡುತ್ತಿದ್ದಾರೋ ಗೊತ್ತಿಲ್ಲ, ಇಷ್ಟಕ್ಕೂ ಯಾರು ಅವರ ಪೌರತ್ವವನ್ನು ಕಿತ್ತುಕೊಳ್ಳುತ್ತಿಲ್ಲ.
ಒಂದು ವೇಳೆ ಅವರು 10 ಜನಪಥ್ ನಲ್ಲಿ ವಾಸಿಸುತ್ತಾರೋ ಅಥವಾ ತಿಹಾರ ಜೈಲಿನಲ್ಲಿರುತ್ತಾರೋ ಎಂಬುದು ನನಗೆ ಗೊತ್ತಿಲ್ಲ, ಆದರೇ ಅವರ ಪೌರತ್ವವನ್ನು ಯಾರು ಕಸಿದುಕೊಳ್ಳಲು ಯತ್ನಿಸುತ್ತಿಲ್ಲ ಎಂಬುದಂತು ಸತ್ಯ ಎಂದು ಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


