ಪ್ರಧಾನ ಸುದ್ದಿ

ಮೇ 23ಕ್ಕೆ ಸತತ 2ನೇ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣ

ಮೇ 16ರಂದು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಎಐಎಡಿಎಂಕೆ ಮುಖ್ಯಸ್ಥೆ...

ಮೇ 23ಕ್ಕೆ ಸತತ 2ನೇ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣ
ಜಯಲಲಿತಾರನ್ನು ಅಭಿನಂದಿಸುತ್ತಿರುವ ಪಕ್ಷದ ಕಾರ್ಯಕರ್ತ
Published On :
ಚೆನ್ನೈ: ಮೇ 16ರಂದು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 23 ರಂದು ಸತತ 2ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇಂದು ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಎಐಎಡಿಎಂಕೆಯ ನೂತನ ಶಾಸಕರ ಸಭೆಯಲ್ಲಿ ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಬೇಕು. ಆದರೆ 134 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಎಐಎಡಿಎಂಕೆ ಸ್ಪಷ್ಟ ಬಹುಮತ ಪಡೆದಿದೆ.
ಮುಖ್ಯಮಂತ್ರಿ ಜಯಲಲಿತಾ ಆತ್ಮಿಯ ಬಳಗದಲ್ಲಿರುವ ಓ.ಪನ್ನಿರ್ ಸೆಲ್ವಂ ಮತ್ತು ಕೈಗಾರಿಕೆ ಖಾತೆ ಸಚಿವ ಪಿ.ತಂಗಮಣಿ ಕೂಡಾ ಭಾರಿ ಬಹುಮತದಿಂದ ಗೆಲುವು ಸಾಧಿಸಿದ್ದು, ಜಯಾ ಸಂಪುಟದಲ್ಲಿ ಸಚಿವರಾಗಿ ಮುಂದುವರೆಯಲಿದ್ದಾರೆ.
ತಮಿಳುನಾಡಿನಲ್ಲಿ 1982ರ ನಂತರ ಯಾವುದೇ ಪಕ್ಷ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದಿರಲಿಲ್ಲ. ಆದರೆ ಈ ಬಾರಿ ತಮಿಳು ಮತದಾರರು ಎರಡನೇ ಬಾರಿ ಅಮ್ಮನನ್ನು ಗೆಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.