ಪ್ರಧಾನ ಸುದ್ದಿ

ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ ಜಯಾ

ಸತತ 2ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಶನಿವಾರ ರಾಜ್ಯಪಾಲ...

ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ ಜಯಾ
ಜಯಲಲಿತಾ
Published On :
ಚೆನ್ನೈ: ಸತತ 2ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಶನಿವಾರ ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ ಜಯಾ, ಎಐಎಡಿಎಂಕೆಯ 133 ಶಾಸಕರು ತಮ್ಮನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿರುವ ಕುರಿತು ಪತ್ರ ನೀಡಿದರು.
ಈ ಮಧ್ಯೆ ಜಯಲಲಿತಾ ಹಾಗೂ ಅವರ ಸಂಪುಟದ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮದ್ರಾಸ್ ವಿವಿ ಆಡಿಟೋರಿಯಂನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಮೇ 25ಕ್ಕೆ ತಮಿಳುನಾಡಿನ 18ನೇ ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣವಚನ ಸ್ವಿಕರೀಸಲಿದ್ದಾರೆ.
ಇತ್ತೀಚಿಗಷ್ಟೇ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 232 ಸ್ಥಾನಗಳ ಪೈಕಿ ಎಐಎಡಿಎಂಕೆ 134 ಸ್ಥಾನಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.